ಕ್ರೀಡೆ

Border-Gavaskar Trophy ಎರಡನೇ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ; ತಂಡದಲ್ಲಿ ಮೂರು ಬದಲಾವಣೆ

ಅಡಿಲೇಡ್​: ಇಲ್ಲಿನ ಅಡಿಲೇಡ್​ ಓವಲ್​ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್​-ಗವಾಸ್ಕರ್ ಟ್ರೋಫಿಯ (Border-Gavaskar Trophy) ಅಹಿರ್ನಿಶಿ ಟೆಸ್ಟ್​ ಪಂದ್ಯದಲ್ಲಿ ಟೀಮ್​ ಇಂಡಿಯಾ (Team India) ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದು, ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ.

ಮೊದಲ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿದ್ದ ರೋಹಿತ್​ ಶರ್ಮ ಹಾಗೂ ಶುಭಮನ್​ ಗಿಲ್​ ತಂಡದಲ್ಲಿ ಸ್ಥಾನ ಪಡೆದಿದ್ದು, ವಾಷಿಂಗ್ಟನ್​ ಸುಂದರ್​ ಬದಲಿಗೆ ಆರ್. ಅಶ್ವಿನ್​ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ದೇವದತ್​ ಪಡಿಕ್ಕಲ್​ ಹಾಗೂ ಧ್ರೂವ್​ ಜುರೆಲ್​ರನ್ನು ತಂಡದಿಂದ ಕೈ ಬಿಡಲಾಗಿದೆ.

ಯಶಸ್ವಿ ಜೈಸ್ವಾಲ್ ಜತೆ ಕೆ.ಎಲ್.ರಾಹುಲ್ ಇನಿಂಗ್ಸ್ ಆರಂಭಿಸಲಿದ್ದು, ನಾಯಕ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ಮೊದಲ ಟೆಸ್ಟ್​ನಲ್ಲಿ 295 ರನ್​ಗಳ ಭರ್ಜರಿ ಜಯ ದಾಖಲಿಸಿದ್ದ ಭಾರತ ತಂಡವು ತನ್ನ ಗೆಲುವಿನ ಓಟವನ್ನು ವಿಸ್ತರಿಸಲು ಸಜ್ಜಾಗಿದ್ದು, ಆತಿಥೇಯರಿಗೆ ತವರು ನೆಲದಲ್ಲಿ ಮಣ್ಣುಮುಕ್ಕಿಸಲು ರೆಡಿಯಾಗಿದೆ.

ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್ (Border-Gavaskar)​ ಟೆಸ್ಟ್​ ಸರಣಿಯೂ ನವೆಂಬರ್​ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (ನಾಯಕ), ರಿಷಭ್​ ಪಂತ್ (ವಿಕೆಟ್​ ಕೀಪರ್​), ನಿತೀಶ್ ಕುಮಾರ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

https://www.vijayavani.net/gauthami-selected-as-bigg-boss-house-captain

https://www.vijayavani.net/border-gavaskar-trophy-adelaide-test-pitch-and-weather-report-will-conditions-only-help-pacers