ಕ್ರೀಡೆ

ವಿಶ್ವಕಪ್ ನ್ಯೂಜಿಲೆಂಡ್ ತಂಡಕ್ಕೆ ಮರಳಿದ ಕೇನ್ ವಿಲಿಯಮ್ಸನ್

ಆಕ್ಲೆಂಡ್: ಮುಂಬರುವ ಏಕದಿನ ವಿಶ್ವಕಪ್‌ಗೆ ಹಾಲಿ ರನ್ನರ್ ಅಪ್ ನ್ಯೂಜಿಲೆಂಡ್ ಸೋಮವಾರ ಅನುಭವಿ 15 ಆಟಗಾರರ ತಂಡ ಆಯ್ಕೆ ಮಾಡಿದ್ದು, ಗಾಯದ ಸಮಸ್ಯೆಯಿಂದ ಐದು ತಿಂಗಳಿನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡಕ್ಕೆ ಮರಳಿದ್ದಾರೆ. ಜತೆಗೆ ತಂಡದ ರಾಷ್ಟ್ರೀಯ ಗುತ್ತಿಗೆ ಪಟ್ಟಿಯಿಂದ ಹೊರಗುಳಿಯಲು ನಿರ್ಧರಿಸಿದ್ದ ವೇಗಿ ಟ್ರೆಂಟ್ ಬೌಲ್ಟ್, ಆಲ್ರೌಂಡರ್ ಜಿಮ್ಮಿ ನಿಶಾಮ್ ಸಹ ಸ್ಥಾನ ಪಡೆದುಕೊಂಡಿದ್ದಾರೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ವಿಲಿಯಮ್ಸನ್ ಆಡುವ ಬಗ್ಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಖಚಿತಪಡಿಸಿಲ್ಲ. ವಿಕೆಟ್ ಕೀಪರ್-ಬ್ಯಾಟರ್ ಟಾಮ್ ಲಾಥಮ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.

ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲಾಥಮ್ (ಉಪ ನಾಯಕ, ವಿ.ಕೀ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ ವೇ, ಲಾಕಿ ರ್ಗ್ಯುಸನ್, ಮ್ಯಾಟ್ ಹೆನ್ರಿ, ಡೆರಿಲ್ ಮಿಚೆಲ್, ಜಿಮ್ಮಿ ನಿಶಾಮ್, ಗ್ಲೇನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್.