CCL 2025: ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.
ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ ಹೊರಗಹೊಮ್ಮಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಬಾರಿ ಕಪ್ ಗೆಲ್ಲುವ ತವಕದಲ್ಲಿದೆ. ಈ ಬಾರಿಯ ವಿಶೇಷ ಅಂದ್ರೆ ಕಳೆದ ಬಾರಿ ಮಿಸ್ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ತಂಡ ಸೇರ್ಪಡೆಯಾಗಿದ್ದಾರೆ.
ಈ ಬಾರಿ ಒಟ್ಟು 7 ತಂಡಗಳು ಕ್ರಿಕೆಟ್ ಆಡಲಿವೆ. ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್‌ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್ ಸೇರಿದಂತೆ 7 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಸಿಸಿಎಲ್ ಸೀಸನ್ 11ಕ್ಕೆ Blobs ಟೈಟಲ್ ಸ್ಪಾನ್ಸರ್ ಮಾಡುತ್ತಿದ್ದು, ಏರ್ಟೆಲ್ ಪೇಮೆಂಟ್ ಬ್ಯಾಂಕ್ ಕೋ ಸ್ಪಾನ್ಸರ್ ಮಾಡುತ್ತಿದ್ದಾರೆ. ಅಸೋಸಿಯೇಟ್ ಸ್ಪಾನ್ಸರ್ ಆಗಿ NICE ಲಿಮಿಟೆಡ್, ಇಕ್ಯೂಪ್ಮೆಂಟ್ ಸ್ಪಾನ್ಸರ್ SG, ಅನಾಲೈಟಿಕ್ ಸ್ಪಾನ್ಸರ್ St8bat ಸಾಥ್ ಕೊಡುತ್ತಿದ್ದಾರೆ.
ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ , ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ಕರಣ್ ಆರ್ಯನ್, ಮಂಜುನಾಥ್ ಗೌಡ, ಸಾಗರ್ ಗೌಡ, ಅಲಕಾನಂದ ಮತ್ತು ತ್ರಿವಿಕ್ರಮ್.
ಬೆಂಗಳೂರಿನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರಿನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣೆಸಲಿವೆ. ನಾಲ್ಕು ತಂಡಗಳಾದ ಭೋಜ್‌ಪುರಿ ದಬಾಂಗ್ಸ್, ಬೆಂಗಾಲ್ ಟೈಗರ್ಸ್, ಮುಂಬೈ ಹೀರೋಸ್ ಮತ್ತು ಪಂಜಾಬ್ ಡಿ ಶೇರ್ ಫೆಬ್ರವರಿ 9 ರಂದು ದೆಹಲಿಯಲ್ಲಿ ಆಡಲಿವೆ. ಆನಂತರದ ಪಂದ್ಯಗಳು ಕ್ರಮವಾಗಿ ಹೈದರಾಬಾದ್, ಕಟಕ್, ಸೂರತ್‌ನಲ್ಲಿ ನಡೆಯಲಿವೆ. ಮಾರ್ಚ್ 1ರಂದು ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮತ್ತು ಮಾರ್ಚ್ 2ರಂದು ಫೈನಲ್ ಪಂದ್ಯ ನಡೆಯಲಿದೆ. ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ.
8 ಫೆಬ್ರವರಿ - ತೆಲುಗು ವಾರಿಯರ್ಸ್ - ಬೆಂಗಳೂರು
14 ಫೆಬ್ರವರಿ - ಚೆನ್ನೈ ರೈನೋಸ್ - ಹೈದರಾಬಾದ್
15 ಫೆಬ್ರವರಿ - ಮುಂಬೈ ಹೀರೋಸ್ - ಹೈದರಾಬಾದ್
22 ಫೆಬ್ರವರಿ - ಪಂಜಾಬ್ ಶೇರ್ - ಸೂರತ್