ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ (Champions Trophy) ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸುವ ಮೂಲಕ ಅಜೇಯವಾಗಿ ಫೈನಲ್ ಪ್ರವೇಶಿಸಿದ್ದು, ಆಸ್ಟ್ರೇಲಿಯಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡವು ನಾಯಕ ಸ್ಟೀವ್ ಸ್ಮಿತ್ (73 ರನ್, 96 ಎಸೆತ, 4 ಬೌಂಡರಿ, 1 ಸಿಕ್ಸರ್), ಆಲೆಕ್ಸ್ ಕ್ಯಾರಿ (61 ರನ್, 57 ಎಸೆತ, 8 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ಫಲವಾಗಿ 49.3 ಓವರ್ಗಳಲ್ಲಿ 264 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ಮೊಹಮ್ಮದ್ ಶಮಿ (10-0-48-3), ವರುಣ್ ಚಕ್ರವರ್ತಿ (10-0-49-2), ರವೀಂದ್ರ ಜಡೇಜಾ (8-1-40-2), ಅಕ್ಷರ್ ಪಟೇಲ್ (8-1-43-1), ಕುಲ್ದೀಪ್ ಯಾದವ್ (8-0-44-0), ಹಾರ್ದಿಕ್ ಪಾಂಡ್ಯ (5.3-40-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
ಗುರಿ ಬೆನ್ನತ್ತಿದ್ದ ಭಾರತ ತಂಡವು ವಿರಾಟ್ ಕೊಹ್ಲಿ (84 ರನ್, 98 ಎಸೆತ, 5 ಬೌಂಡರಿ), ಶ್ರೇಯಸ್ ಅಯ್ಯರ್ (42 ರನ್, 62 ಎಸೆತ, 3 ಬೌಂಡರಿ), ಕೆ.ಎಲ್. ರಾಹುಲ್ (42 ರನ್*, 34 ಎಸೆತ, 2 ಬೌಂಡರಿ, 2 ಸಿಕ್ಸರ್) ಉಪಯುಕ್ತ ಆಟದ ಫಲವಾಗಿ 48.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ಗಳಿಸಿ ಗೆಲುವಿನ ನಗೆ ಬೀರಿತು.
ಆಸ್ಟ್ರೇಲಿಯಾ ಪರ ನಾಥನ್ ಎಲ್ಲಿಸ್ (10-0-49-2), ಆ್ಯಡಂ ಜಂಪಾ (10-0-60-2), ಕೂಪರ್ ಕೊನೊಲಿ (8-0-37-1), ಬೆನ್ ದ್ವಾರ್ಶುಯಿಸ್ (7-0-39-1), ತನ್ವೀರ್ ಸಂಘ (6-0-41-0), ಗ್ಲೆನ್ ಮ್ಯಾಕ್ಸ್ವೆಲ್ (6.1-0-35-0), ಟ್ರಾವಿಸ್ ಹೆಡ್ (1-0-6-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.