ಕ್ರೀಡೆ

Champions Trophy| ಭಾರತದ ದಾಳಿಗೆ ತತ್ತರಿಸಿದ ಕಾಂಗರೂ ಪಡೆ; ಟೀಮ್​ ಇಂಡಿಯಾಗೆ 265 ರನ್​ ಗುರಿ ನೀಡಿದ ಆಸ್ಟ್ರೇಲಿಯಾ

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ (Champions Trophy) ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಕಾಂಗರೂ ಪಡೆಯನ್ನು ಟೀಮ್ ಇಂಡಿಯಾ 264 ರನ್​ಗಳಿಗೆ ಕಟ್ಟಿಹಾಕಿದೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡವು ನಾಯಕ ಸ್ಟೀವ್ ಸ್ಮಿತ್ (73 ರನ್, 96 ಎಸೆತ, 4 ಬೌಂಡರಿ, 1 ಸಿಕ್ಸರ್​), ಆಲೆಕ್ಸ್ ಕ್ಯಾರಿ (61 ರನ್, 57 ಎಸೆತ, 8 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ಫಲವಾಗಿ 49.3 ಓವರ್​ಗಳಲ್ಲಿ 264 ರನ್​ಗಳಿಗೆ ಆಲೌಟ್ ಆಯಿತು.

ಭಾರತದ ಪರ ಮೊಹಮ್ಮದ್ ಶಮಿ (10-0-48-3), ವರುಣ್ ಚಕ್ರವರ್ತಿ (10-0-49-2), ರವೀಂದ್ರ ಜಡೇಜಾ (8-1-40-2), ಅಕ್ಷರ್ ಪಟೇಲ್ (8-1-43-1), ಕುಲ್​ದೀಪ್ ಯಾದವ್ (8-0-44-0), ಹಾರ್ದಿಕ್ ಪಾಂಡ್ಯ (5.3-40-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ XI ಹೀಗಿದೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

ಆಸ್ಟ್ರೇಲಿಯಾ: ಕೂಪರ್ ಕೊನೊಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ಕ್ಯಾಪ್ಟನ್), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಾಕ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ.