ಬ್ರಿಸ್ಬೇನ್: ಇಲ್ಲಿನ ದಿ ಗಾಬಾ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ ಬಾರ್ಡರ್-ಗವಾಸ್ಕರ್ (Border Gavaskar Trophy) ಟ್ರೋಫಿಯ ಮೂರನೇ ಪಂದ್ಯಕ್ಕೆ ಈಗಾಗಲೇ ಉಭಯ ತಂಡಗಳು ಭರ್ಜರಿ ತಯಾರಿ ಆರಂಭಿಸಿದ್ದು, ಎರಡನೇ ಪಂದ್ಯದ ಸೋಲಿನಿಂದ ಪುಟಿದೇಳುವ ನಿಟ್ಟಿನಲ್ಲಿ ಭಾರತ ತಂಡ ಅಭ್ಯಾಸ ನಡೆಸುತ್ತಿದೆ.
ಇನ್ನೂ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಭಾರತ ತಂಡದಲ್ಲಿ (Team India) ಬದಲಾವಣೆಗಳಾಗಲಿದ್ದಾವೆ ಎಂದು ಹೇಳಲಾಗಿದ್ದು, ಈ ಬಗ್ಗೆ ಚೇತೇಶ್ವರ್ ಪೂಜಾರಾ (Cheteshwar Pujara)ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ತಂಡದಲ್ಲಿ ಒಂದು ಬದಲಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಪೂಜಾರ (Cheteshwar Pujara), ನನ್ನ ಪ್ರಕಾರ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗುವುದು ಎಂದು ಭಾವಿಸುತ್ತೇನೆ. ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆಯಬಹುದು. ತಂಡದಲ್ಲಿ ಬ್ಯಾಟಿಂಗ್ ಸಮತೋಲತೆ ಬೇಕಾಗಿರುವುದರಿಂದ ಅಶ್ವಿನ್ ಬದಲಿಗೆ ಸುಂದರ್ ಸ್ಥಾನ ಪಡೆಯುತ್ತಾರೆ.
ಮೂರನೇ ಟೆಸ್ಟ್‌ನಲ್ಲಿ ಹರ್ಷಿತ್ ರಾಣಾರನ್ನು ತಂಡದಲ್ಲಿ ಮುಂದುವರೆಸುವ ಬಗ್ಗೆ ಮಾತನಾಡಿ, ನನ್ನ ಪ್ರಕಾರ, ಹರ್ಷಿತ್ ರಾಣಾ ಈಗಷ್ಟೇ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದಾರೆ. ಹೀಗಾಗಿ ನಾವು ಅವರಿಗೆ ಬೆಂಬಲ ನೀಡಬೇಕು. ಅಲ್ಲದೆ ಅವರು ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಒಂದು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಮಾತ್ರಕ್ಕೆ ಅವರನ್ನು ತಂಡದಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಕ್ರಿಕೆಟಿಗ ಚೇತೇಶ್ವರ ಪೂಜಾರ (Cheteshwar Pujara) ಅಭಿಪ್ರಾಯಪಟ್ಟಿದ್ದಾರೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.