ರೋಹಿತ್​ ಶರ್ಮಾ 
ಕ್ರೀಡೆ

Cricket: ಗಂಭೀರ್ ದಾಖಲೆ ಅಳಿಸಿದ ಹಿಟ್‌ಮ್ಯಾನ್ ರೋಹಿತ್

ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್ ಭಾರಿ ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.

ರೋಹಿತ್ ಶರ್ಮಾ 23 ರನ್ ಗಳಿಸಿ ಮೆಹಿದಿ ಹಸನ್ ಮಿರಾಜ್ ಬೌಲಿಂಗ್‌ನಲ್ಲಿ ವಿಕೆಟ್ ಕಳೆದುಕೊಂಡರು. ಅವರು ದೊಡ್ಡ ಇನ್ನಿಂಗ್ಸ್ ಆಡದಿದ್ದರೂ, ಕೇವಲ 7 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ದಾಖಲೆಯನ್ನು ಮುರಿದ್ದಾರೆ.

ಅಲ್ಲದೆ, ರೋಹಿತ್ ಶರ್ಮಾ ಅವರ ಇನ್ನಿಂಗ್ಸ್‌ನಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳು ಬಂದಿದ್ದು, ಕ್ರಿಕೆಟ್ ಅಭಿಮಾನಿಗಳ ಮನತಣಿಸಿತು.

ಟೆಸ್ಟ್ ಕ್ರಿಕೆಟ್‌ನಲ್ಲಿ ಗಂಭೀರ್ ಅವರಿಗಿಂತ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್​ ಎಂಬ ಹೆಗ್ಗಳಿಕೆ ಪಾತ್ರಾರದರು. ರೋಹಿತ್ ಇಲ್ಲಿ ತನಕ 60 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 4171 ರನ್‌ ಗಳಿಸಿದ್ದಾರೆ. ಅವರು 12 ಶತಕ ಹಾಗೂ 17 ಅರ್ಧಶತಕಗಳನ್ನು ಹೊಂದಿದ್ದಾರೆ.

ಇತ್ತ ಗೌತಮ್ ಗಂಭೀರ್ 58 ಟೆಸ್ಟ್‌ ಪಂದ್ಯಗಳನ್ನಾಡಿದ್ದು, 9 ಶತಕ ಹಾಗೂ 22 ಅರ್ಧಶತಕಗಳೊಂದಿಗೆ 4154 ರನ್‌ ಹೊಡೆದಿದ್ದಾರೆ.

ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ಮೂರು ಓವರ್‌ಗಳಲ್ಲಿ 50 ರನ್ ಗಳಿಸಿದರು. ಇದು ಟೆಸ್ಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ತಂಡ ಗಳಿಸದ ವೇಗದ ಅರ್ಧಶತಕವಾಗಿದೆ. ಇದಾದ ಬಳಿಕ ಟೀಮ್ ಇಂಡಿಯಾ ಅತಿ ವೇಗದ ಶತಕದ ದಾಖಲೆಯನ್ನೂ ಮಾಡಿದೆ.

ಇದಲ್ಲದೆ, ಭಾರತ ತನ್ನ ಹೆಸರಿನಲ್ಲಿ ಮತ್ತೊಂದು ದಾಖಲೆ ಮಾಡಿದೆ. ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಜೊತೆಗೆ ಟೀಮ್ ಇಂಡಿಯಾ ಇಂಗ್ಲೆಂಡ್ ದಾಖಲೆಯನ್ನು ಮುರಿದಿದೆ. 2022ರಲ್ಲಿ ಆಂಗ್ಲ ಪಡೆ 89 ಸಿಕ್ಸರ್‌ಗಳನ್ನು ಬಾರಿಸಿತ್ತು.