ಅಭಿಷೇಕ್​ ಶರ್ಮಾ 
ಕ್ರಿಕೆಟ್

ಅಭಿಷೇಕ್​ ಶರ್ಮಾ ದಾಖಲೆಯ ಆಟ...ವಿಂಡೀಸ್​​ಗೆ ಬಿಗ್​ ಟಾರ್ಗೆಟ್​ ನೀಡಿದ ಟೀಮ್​ ಇಂಡಿಯಾ | IndVsWI

IndVsWI: ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಇಶಾನ್ ಕಿಶನ್ ಅವರ ಸ್ಫೋಟಕ ಸಾಥ್‌ ಬಲದಿಂದ, ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಿದೆ. ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪ್ರಮುಖ ಪಂದ್ಯದಲ್ಲಿ ಭಾರತ ತಂಡವು ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 20 ಓವರ್‌ಗಳಲ್ಲಿ 223 ರನ್‌ಗಳ ದೊಡ್ಡ ಮೊತ್ತವನ್ನು ಕಲೆಹಾಕಿದೆ. ಇದರೊಂದಿಗೆ ವಿಂಡೀಸ್ ತಂಡಕ್ಕೆ ಕಠಿಣ ಸವಾಲನ್ನು ಒಡ್ಡಿದೆ.

ಪಂದ್ಯದ ಆರಂಭದಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಬಿರುಸಿನ 69 ರನ್‌ಗಳನ್ನು ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ತಮ್ಮ ಈ ಸಾಹಸಮಯ ಇನ್ನಿಂಗ್ಸ್‌ ಜೊತೆಗೆ ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳನ್ನು (1,024) ಎದುರಿಸಿ 2,000 ರನ್‌ಗಳನ್ನು ಪೂರೈಸಿದ ವಿಶ್ವದ ನಂ.1 ಬ್ಯಾಟರ್ ಎಂಬ ಹೆಗ್ಗಳಿಗೆ ಇವರು ಪಾತ್ರರಾಗಿದ್ದಾರೆ. ಇಲ್ಲಿಯವರೆಗೂ ಈ ದಾಖಲೆ ಸೂರ್ಯಕುಮಾರ್ ಯಾದವ್ (1,164 ಎಸೆತಗಳು) ಹೆಸರಿನಲ್ಲಿತ್ತು.

ಇಶಾನ್ ಕಿಶನ್ ಸಾಥ್​

ಮತ್ತೋರ್ವ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೇವಲ 3 ರನ್ ಗಳಿಸಿ (6 ಎಸೆತ) ಬೇಗನೇ ಔಟಾಗಿ ನಿರಾಸೆ ಮೂಡಿಸಿದರು. ಅವರ ವಿಕೆಟ್​ ಬಳಿಕ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದ ಇಶಾನ್ ಕಿಶನ್ ಅವರು ಅಭಿಷೇಕ್ ಶರ್ಮಾ ಅವರೊಂದಿಗೆ ಸೇರಿಕೊಂಡು ವೆಸ್ಟ್ ಇಂಡೀಸ್ ಬೌಲಿಂಗ್ ವಿಭಾಗವನ್ನು ಅಕ್ಷರಶಃ ಚೆಂಡಾಡಿದರು. ಈ ಜೋಡಿಯು ಕೇವಲ 40 ಎಸೆತಗಳಲ್ಲಿ ಭರ್ಜರಿ 108 ರನ್‌ಗಳ ಅಮೂಲ್ಯ ಜೊತೆಯಾಟ ನಡೆಸಿತು.

ಲಯಕ್ಕೆ ಮರಳಿದ ವಿಂಡೀಸ್ ಬೌಲರ್ಸ್!..ಟೀಮ್​ ಇಂಡಿಯಾ ಕುಸಿತ

ಪವರ್‌ಪ್ಲೇನಲ್ಲಿ ಟೀಮ್​ ಇಂಡಿಯಾ ಬ್ಯಾಟರ್‌ಗಳ ಅಬ್ಬರಕ್ಕೆ ನಲುಗಿಹೋಗಿದ್ದ ವೆಸ್ಟ್ ಇಂಡೀಸ್ ಬೌಲರ್‌ಗಳು, ಮಧ್ಯಮ ಓವರ್‌ಗಳಲ್ಲಿ ಅತ್ಯುತ್ತಮವಾಗಿ ಕಮ್‌ಬ್ಯಾಕ್ ಮಾಡಿದರು. ಸತತವಾಗಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ರನ್ ವೇಗಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು. ವೆಸ್ಟ್ ಇಂಡೀಸ್ ಪರ ರೋಸ್ಟನ್ ಚೇಸ್, ಶಮರ್ ಜೋಸೆಫ್ ಮತ್ತು ಶಮರ್ ಸ್ಪ್ರಿಂಗರ್ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿ ತಲಾ ಎರಡು ವಿಕೆಟ್‌ಗಳನ್ನು ಪಡೆದು ಮಿಂಚಿದರು(ಏಜೆನ್ಸೀಸ್​).