ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್ ಸೂರ್ಯವಂಶಿ
- ಐಪಿಎಲ್‌ನಲ್ಲಿ ಧೂಳೆಬ್ಬಿಸಿದ್ದ 15 ವರ್ಷದ ವೈಭವ್ ಸೂರ್ಯವಂಶಿ
- ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್ ಸೂರ್ಯವಂಶಿ
- ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಳೆಯ ದಾಖಲೆ ಬ್ರೇಕ್
ಕ್ರಿಕೆಟ್: ಈ ವರ್ಷದ ಐಪಿಎಲ್‌ನಲ್ಲಿ ಬಹು ಚರ್ಚಿತ ಹಾಗೂ ಖ್ಯಾತಿ ಪಡೆದ ಆಟಗಾರ ಯಾರೆಂದು ಕೇಳಿದರೆ ಎಲ್ಲರ ಬಾಯಲ್ಲಿ ಕೇಳಿಬರುವ ಹೆಸರೆಂದರೆ ಅದು ವೈಭವ್ ಸೂರ್ಯವಂಶಿ (Vaibhav Suryavanshi) ಎಂದರೆ ತಪ್ಪಾಗದು. ರಾಜಸ್ಥಾನ್ ರಾಯಲ್ಸ್ ಪರವಾಗಿ ಓಪನಿಂಗ್ ಮಾಡಿದ 15 ರ ಈ ಪೋರ ಈ ಸೀಸನ್ನಲ್ಲಿ ಅರೆಂಜ್ ಕ್ಯಾಪ್ ಜೊತೆಗೆ ಇತರ ನಾಲ್ಕು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾನೆ.
ಐಪಿಎಲ್‌ನಲ್ಲಿ ತನ್ನ ಅಮೋಘ ಪ್ರದರ್ಶನದ ಮೂಲಕ ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರ ಗಮನ ಸೆಳೆದ ವೈಭವ್ ಈಗ ಐರ್ಲೆಂಡ್, ಇಂಗ್ಲೆಂಡ್ ಹಾಗೂ ಏಷ್ಯನ್ ಗೇಮ್ಸ್ಗೆ ಪ್ರಕಟವಾದ ತಂಡದಲ್ಲಿ ಆಯ್ಕೆಯಾಗುವ ಮೂಲಕ ಕ್ರಿಕೆಟ್ ದೇವರಾದ ಸಚಿನ್ ತೆಂಡೂಲ್ಕರ್ ಅವರ 37 ವರ್ಷ ಹಳೆಯ ದಾಖಲೆಯನ್ನು ಮುರಿದಿದ್ದಾನೆ.
ದೇವರ ದಾಖಲೆ ಮುರಿದ ವೈಭವ್!
ನವೆಂಬರ್ 1989 ರಲ್ಲಿ ಪಾಕಿಸ್ತಾನದ ವಿರುದ್ಧದ ಟೂರ್ನಿಗೆ 16 ವರ್ಷದ ಸಚಿನ್ ತೆಂಡೂಲ್ಕರ್ ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗುವ ಮೂಲಕ ರಾಷ್ಟ್ರೀಯ ತಂಡ ಸೇರಿದ ದೇಶದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದರು.
ಈ ದಾಖಲೆಯನ್ನು ಸಚಿನ್ ಕಳೆದ 37 ವರ್ಷಗಳಿಂದ ಉಳಿಸಿಕೊಂಡು ಬಂದಿದ್ದರು. ಆದರೆ ಈಗ 15 ವರ್ಷದ ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಕ್ರಿಕೆಟ್ ದೇವರೆಂದೆ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದ್ದಿದ್ದಾನೆ.
ಇಂಗ್ಲೆಂಡ್, ಐರ್ಲೆಂಡ್ ಮತ್ತು ಏಷ್ಯನ್ ಗೇಮ್ಸ್ಗೆ ಭಾರತ ತಂಡ
ಇಂಗ್ಲೆಂಡ್ ಸರಣಿಗೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಶಿವಂ ದುಬೆ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.
ಐರ್ಲೆಂಡ್ ಸರಣಿಗೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷ್ದೀಪ್ ಸಿಂಗ್, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.
ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ ಮತ್ತು ವೈಭವ್ ಸೂರ್ಯವಂಶಿ, (ಏಜನ್ಸೀಸ್).