BCCI  
ಕ್ರಿಕೆಟ್

ಬೆಂಗಳೂರಿಗೆ ಬರುವಂತೆ ಹಾರ್ದಿಕ್, ರೋಹಿತ್​ ಶರ್ಮಾಗೆ BCCI ಖಡಕ್ ಆರ್ಡರ್! ಅಸಲಿ ಕಾರಣವೇನು?

ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮುಂಬರುವ ಏಕೈಕ ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ (ODI) ಸರಣಿಗೆ ಕೌಂಟ್‌ಡೌನ್ ಆರಂಭವಾಗಿದೆ. ಜೂನ್ 6 ರಿಂದ ಟೆಸ್ಟ್ ಪಂದ್ಯ ಹಾಗೂ ಜೂನ್ 13 ರಿಂದ ಏಕದಿನ ಸರಣಿ ಆರಂಭಗೊಳ್ಳಲಿದ್ದು, ಇದಕ್ಕಾಗಿ BCCI ಈಗಾಗಲೇ ಬಲಿಷ್ಠ ತಂಡಗಳನ್ನು ಪ್ರಕಟಿಸಿದೆ.
ಏಕದಿನ ಸರಣಿಯ ತಂಡದಲ್ಲಿ ಸ್ಥಾನ ಪಡೆದಿರುವ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಟವು ಸಂಪೂರ್ಣವಾಗಿ ಅವರ 'ಫಿಟ್‌ನೆಸ್ ಕ್ಲಿಯರೆನ್ಸ್' ಮೇಲೆಯೇ ಆಧಾರಿತವಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದೇ ಕಾರಣಕ್ಕೆ ಇಬ್ಬರೂ ಆಟಗಾರರಿಗೆ ಬೆಂಗಳೂರಿನಲ್ಲಿರುವ ಬಿಸಿಸಿಐನ 'ಸೆಂಟರ್ ಆಫ್ ಎಕ್ಸಲೆನ್ಸ್' (CoE) ಕೇಂದ್ರಕ್ಕೆ ವರದಿ ಮಾಡಿಕೊಳ್ಳುವಂತೆ ಮಂಡಳಿ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ವರದಿಯ ಪ್ರಕಾರ, ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈಗಾಗಲೇ ಬೆಂಗಳೂರಿನ CoE ತಲುಪಿದ್ದು, ಏಕದಿನ ಸರಣಿಗೆ ಸಜ್ಜಾಗಲು ಇಲ್ಲಿ ಕನಿಷ್ಠ ಒಂದು ವಾರಗಳ ಕಾಲ ಕಠಿಣ ಫಿಟ್‌ನೆಸ್ ತರಬೇತಿ ನಡೆಸಲಿದ್ದಾರೆ. ಆದರೆ, ತಂಡದ ಹಿರಿಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ ಅಪ್‌ಡೇಟ್ ಮಾತ್ರ ಇನ್ನೂ ಲಭ್ಯವಾಗಿಲ್ಲ. ಅವರು ಯಾವಾಗ ವರದಿ ಮಾಡಿಕೊಳ್ಳಲಿದ್ದಾರೆ ಎಂಬುದು ಸದ್ಯಕ್ಕೆ ನಿಗೂಢವಾಗಿದೆ.

ಭಾರತ ಏಕದಿನ ತಂಡ ಇಂತಿದೆ

ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ,(ಏಜೆನ್ಸೀಸ್​).