ನವದೆಹಲಿ: ದಕ್ಷಿಣ ಆಫ್ರಿಕಾದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ.
ಭಾರತ ಏಕದಿನ ತಂಡ ಹೀಗಿದೆ..
ಕೆ.ಎಲ್.ರಾಹುಲ್(ಕ್ಯಾಪ್ಟನ್), ರಿಷಭ್ ಪಂತ್(ಉಪ-ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಹರ್ಷದೀಪ್ ಸಿಂಗ್ ಮತ್ತು ಧೃವ್ ಜುರೆಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನ.30ರಂದು ಮೊದಲ ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು, ಡಿ.3ರಂದು ಎರಡನೇ ಪಂದ್ಯ ರಾಯಪುರ ಮತ್ತು ಡಿ.6ರಂದು ವಿಶಾಖಪಟ್ನಂನಲ್ಲಿ ಕೊನೆ ಪಂದ್ಯ ನಡೆಯಲಿದೆ.
ನ.30ರಂದು ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಸದ್ಯ ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್‌ಗೆ ಮುನ್ನೆಚ್ಚರಿಕೆಯಾಗಿ ಆಫ್ರಿಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಸಿಗುವ ಸಾಧ್ಯತೆಗಳಿವೆ(ಏಜೆನ್ಸೀಸ್).