ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಅಭಿಷೇಕ್ ಪೊರೆಲ್ ಮೇಲೆ ಅತ್ಯಾಚಾರ ಹಾಗೂ ಬ್ಲಾಕ್‌ಮೇಲ್ ಆರೋಪ
- ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಅಭಿಷೇಕ್ ಪೊರೆಲ್ ಮೇಲೆ ಅತ್ಯಾಚಾರ ಹಾಗೂ ಬ್ಲಾಕ್‌ಮೇಲ್ ಆರೋಪ
- ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ಅತ್ಯಾಚಾರ ಮತ್ತು ನಗ್ನ ವಿಡಿಯೋ ಬ್ಲಾಕ್‌ಮೇಲ್ ದೂರಿನ ಹಿನ್ನೆಲೆ ಕಲ್ಕತ್ತಾ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್ ಕೀಪರ್ ಅಭಿಷೇಕ್ ಪೊರೆಲ್ (Abhishek Porel) ನನ್ನು ವಶಕ್ಕೆ ಪಡೆಯುವಂತೆ ಕಲ್ಕತ್ತಾ ಹೈಕೋರ್ಟ್ ತನಿಖಾಧಿಕಾರಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.
ಮೊಗ್ರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಸಂಖ್ಯೆ 346/2026 ಪ್ರಕಾರ ಪೊರೆಲ್ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿರುವ ಹಿನ್ನಲೆ, ಆತನಿಗೆ ಸಂಬಂಧಪಟ್ಟ ಇಲೆಕ್ಟ್ರಾನಿಕ್ ವಸ್ತುಗಳನ್ನು, ಮತ್ತು ಸಂತ್ರಸ್ತೆಗೆ ಸಂಬಂಧಿಸಿದ ಸಾಮಾಗ್ರಿಗಳನ್ನು ಜಫ್ತಿ ಮಾಡುವಂತೆ ತಿಳಿಸಲಾಗಿದೆ.
ಪ್ರಕರಣದ ಹಿನ್ನಲೆ
ಕ್ರಿಕೆಟರ್ ಅಭಿಷೇಕ್ ಪೊರೆಲ್ ಮೇಲೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಯೊಬ್ಬಳು ಅತ್ಯಾಚಾರದ ಆರೋಪವನ್ನು ಮಾಡಿದ್ದಾಳೆ.
ಅಭಿಷೇಕ್ ಮೊದಲು ನನ್ನ ಜೊತೆ ಮೆಸೇಜ್ ಮಾಡುತ್ತಿದ್ದ, ನಂತರ ಅವನು ನನ್ನ ಅನುಮತಿ ಇಲ್ಲದೆ, ನನ್ನ ನಗ್ನ- ಅರೆ ನಗ್ನ ಫೋಟೊ ಹಾಗೂ ವಿಡಿಯೋಗಳನ್ನು ಸೆರೆ ಹಿಡಿದಿದ್ದಾನೆ. ನಂತರ ಅದನ್ನು ಇಟ್ಟುಕೊಂಡು ನನ್ನನ್ನು ಬ್ಲಾಕ್‌ಮೇಲ್ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆಯಲ್ಲಿ, ಪೊಲೀಸರು ನಾವು ಆರೋಪಿಯನ್ನು ಬಂಧಿಸುವ ಹಾಗೂ ಸಾಕ್ಷಿಗಳನ್ನು ಕಲೆಹಾಕುವ ಪ್ರಯತ್ನದಲ್ಲಿದ್ದೆವೆಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಎರಡು ಪಕ್ಷಗಳ ವಾದವನ್ನು ಆಲಿಸಿದ ನ್ಯಾಯಾಲಯವು, ಇಲ್ಲಿವರೆಗೆ ಈ ಪ್ರಕರಣದಲ್ಲಿ ಏನು ಕ್ರಮ ಕೈಗೊಂಡಿದ್ದಿರೆಂದು ಮುಂದಿನ ವಿಚಾರಣೆಯಲ್ಲಿ ತಿಳಿಸಬೇಂದು ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್ 11 ಕ್ಕೆ ಮುಂದೂಡಿದೆ, (ಏಜನ್ಸೀಸ್).