ಜಸ್‌ಪ್ರೀತ್ ಬುಮ್ರಾ ಬೌಲಿಂಗ್ ನೋಡಿದ್ರೆ... ಫೈನಲ್‌ಗೂ ಮುನ್ನವೇ ಗಂಭೀರ ಆರೋಪ ಮಾಡಿದ ಅಫ್ರಿದಿ! Shahid Afridi
- ಆತಿಥೇಯ ಟೀಮ್ ಇಂಡಿಯಾ ಟಿ20 ವಿಶ್ವಕಪ್ - 2026ರ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ
- ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಭಾರತ ಫೈನಲ್ಗೆ ಲಗ್ಗೆ ಇಟ್ಟಿದೆ
- ಇಂದು ರಾತ್ರಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ
Shahid Afridi : ಆತಿಥೇಯ ಟೀಮ್ ಇಂಡಿಯಾ ಟಿ20 ವಿಶ್ವಕಪ್ - 2026ರ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಗುರುವಾರ (ಮಾರ್ಚ್ 05) ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಭಾರತ ತಂಡ, ಇಂದು ರಾತ್ರಿ ನಡೆಯಲಿರುವ ಫೈನಲ್ ಪಂದ್ಯಕ್ಕಾಗಿ ಸಿದ್ಧವಾಗಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೆಣಸಾಡಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಇದಕ್ಕೆ ಸಾಕ್ಷಿಯಾಗಲಿದೆ.
ಫೈನಲ್ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಪಾಕಿಸ್ತಾನದ ಹಾಲಿ ಮತ್ತು ಮಾಜಿ ಆಟಗಾರರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಾಕ್ನ ಮಾಜಿ ನಾಯಕ ಶಾಹಿದ್ ಅಫ್ರಿದಿ ಇದೀಗ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇಂದು ನಡೆಯಲಿರುವ ಟಿ20 ವಿಶ್ವಕಪ್ ಫೈನಲ್‌ಗೂ ಮೊದಲು ಭಾರತದ ಸ್ಟಾರ್ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಬುಮ್ರಾ ಅವರ ವೇಗದ ಬಗ್ಗೆ ಅನುಮಾನಗಳಿವೆ ಎಂದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಅತ್ಯಂತ ವೇಗದ ಚೆಂಡುಗಳನ್ನು ಎಸೆದಿದ್ದಾರೆ. ಬುಮ್ರಾ ಅವರು ಯಾವುದೇ ಒತ್ತಡವಿಲ್ಲದೆ ಡ್ರಗ್ಸ್ ಸೇವಿಸಿದವರಂತೆ ಬೌಲಿಂಗ್ ಮಾಡಿದ್ದಾರೆ ಎಂದು ಅಫ್ರಿದಿ, ಗಂಭೀರ ಆರೋಪಗಳನ್ನು ಮಾಡಿದ್ದಾರೆ ಎಂದು ವರದಿಯಾಗಿದೆ.
ಡೆತ್ ಓವರ್‌ಗಳಲ್ಲಿ ಜಸ್‌ಪ್ರೀತ್ ಬುಮ್ರಾ ಭಯಾನಕವಾಗಿ ಕಾಣುತ್ತಿದ್ದರು. ಯಾವುದೇ ಒತ್ತಡವಿಲ್ಲದೇ, ನಿರಾತಂಕವಾಗಿ ಚೆಂಡನ್ನು ಎಸೆಯುತ್ತಿದ್ದರು. ಹೀಗಾಗಿ, ಫೈನಲ್‌ಗೂ ಮೊದಲು ಜಸ್‌ಪ್ರೀತ್ ಬುಮ್ರಾ ಡೋಪಿಂಗ್ ಪರೀಕ್ಷೆಗಳಿಗೆ ಒಳಗಾಗಬೇಕು. ಆಗ ಮಾತ್ರ ಬುಮ್ರಾ ಅವರ ನಿಜವಾದ ಬಣ್ಣ ಬಯಲಾಗುತ್ತದೆ ಎಂದು ಅಫ್ರಿದಿ ನಾಲಿಗೆ ಹರಿಬಿಟ್ಟಿದ್ದಾರೆ.
ಬಿಸಿಸಿಐ ಭಯದಿಂದ ಟೀಮ್ ಇಂಡಿಯಾ ಆಟಗಾರರ ಮೇಲೆ ಐಸಿಸಿ, ಡೋಪಿಂಗ್ ಪರೀಕ್ಷೆಗಳನ್ನು ನಡೆಸುತ್ತಿ. ಟೀಮ್ ಇಂಡಿಯಾ ಆಟಗಾರರ ಮೇಲೆ ಡೋಪಿಂಗ್ ಪರೀಕ್ಷೆಗಳನ್ನು ನಡೆಸುವ ಮೂಲಕ ನ್ಯಾಯ ಒದಗಿಸಬೇಕೆಂದು ಶಾಹಿದ್ ಅಫ್ರಿದಿ ಐಸಿಸಿಯನ್ನು ಒತ್ತಾಯಿಸಿದ್ದಾರೆ. ಆದರೆ, ಅಫ್ರಿದಿ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಏಕೆಂದರೆ, ಇಂತಹ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಅಫ್ರಿದಿಗೆ ಚಾಳಿಯಾಗಿದೆ, (ಏಜೆನ್ಸೀಸ್).