RCBvsGT | ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗಿಲ್ 
ಕ್ರಿಕೆಟ್

ಕ್ವಾಲಿಫೈಯರ್ 1... ಫೈನಲ್ ಟಿಕೆಟ್‌ಗಾಗಿ ಆರ್​ಸಿಬಿ-ಜಿಟಿ ರಣರೋಚಕ ಫೈಟ್; ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗಿಲ್! | RCBvsGT

RCBvsGT: 19ನೇ ಆವೃತಿಯ ಐಪಿಎಲ್​​ನ ಬಹುನಿರೀಕ್ಷಿತ ಕ್ವಾಲಿಫೈಯರ್ 1 ಮಹಾಸಮರಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಸಜ್ಜಾಗಿದೆ. ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿರುವ ಈ ಹೈವೋಲ್ಟೇಜ್​ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ನಾಯಕ ಶುಭಮನ್ ಗಿಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದು, ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಫೈನಲ್ ಟಿಕೆಟ್‌ಗಾಗಿ ರಣರೋಚಕ ಫೈಟ್

ಹಾಲಿ ಚಾಂಪಿಯನ್ಸ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸೀಸನ್‌ನ ಲೀಗ್ ಹಂತದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿಯಾಗಿ ಅಬ್ಬರಿಸಿದೆ. ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ತಲುಪುವ ಮಹತ್ವಾಕಾಂಕ್ಷೆಯೊಂದಿಗೆ ಆರ್​ಸಿಬಿ ಇಂದು ಕಣಕ್ಕಿಳಿಯುತ್ತಿದೆ. ಮತ್ತೊಂದೆಡೆ, ಲೀಗ್ ಹಂತದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿರುವ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡವು, ಕಳೆದ ಐದು ವರ್ಷಗಳಲ್ಲಿ ಮೂರನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸುವ ಇರಾದೆಯಲ್ಲಿದೆ.

ಆರ್​ಸಿಬಿ ಮ್ಯಾನೇಜ್‌ಮೆಂಟ್‌ನಿಂದ ಎರಡು ಬಿಗ್ ಶಾಕ್!

ಈ ಕ್ವಾಲಿಫೈಯರ್ ಪಂದ್ಯಕ್ಕಾಗಿ ರಜತ್ ಪಾಟೀದಾರ್ ನೇತೃತ್ವದ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ, ಸ್ಟಾರ್ ಓಪನರ್ ಫಿಲ್ ಸಾಲ್ಟ್​ರನ್ನು ಈ ಪಂದ್ಯದಿಂದಲೂ ಕೈಬಿಡಲಾಗಿದ್ದು, ನ್ಯೂಜಿಲೆಂಡ್‌ನ ವೇಗಿ ಜೇಕಬ್ ಡಫಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಬದಲಾವಣೆಯು ಆರ್​ಸಿಬಿಯ ಬೌಲಿಂಗ್ ವಿಭಾಗವನ್ನು ಬಲಪಡಿಸುವ ತಂತ್ರದ ಭಾಗವಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಇತ್ತ ಗುಜರಾತ್ ಟೈಟನ್ಸ್ ತಂಡದಲ್ಲೂ ಒಂದು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಅರ್ಷದ್ ಖಾನ್ ಬದಲು ಕುಲವಂತ್ ಖೇಜ್ರೋಲಿಯಾರನ್ನು ಕಣಕ್ಕಿಳಿಸಲಾಗಿದೆ(ಏಜೆನ್ಸೀಸ್​).

ತಂಡಗಳು

ಆರ್​​​ಸಿಬಿ: ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (c), ಜಿತೇಶ್ ಶರ್ಮಾ (wk), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಾಸಿಖ್ ಸಲಾಮ್ ದಾರ್.

ಗುಜರಾತ್​​ ಟೈಟನ್ಸ್​: ಸಾಯಿ ಸುದರ್ಶನ್, ಶುಭಮನ್ ಗಿಲ್ (c), ಜೋಸ್ ಬಟ್ಲರ್ (WK), ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.