ಎಲ್ಲಿ ಹೋಯಿತು ಆ ನಿನ್ನ ವೀರ ಪ್ರತಾಪ...? ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ಗೆ ನೆಟ್ಟಿಗರ ತರಾಟೆ! Team India
- ಟೀಮ್ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಇಂದು ಟ್ರೋಲ್ಗೆ ಗುರಿಯಾಗಿದ್ದಾರೆ
- ಸೂಪರ್ 8 ಪಂದ್ಯದಲ್ಲಿ ನೀಡಿದ ಕಳಪೆ ಪ್ರದರ್ಶನದಿಂದಾಗಿ ಅಭಿಷೇಕ್ ವಿರುದ್ಧ ಅಭಿಮಾನಿಗಳು ಗರಂ
- ವಿಂಡೀಸ್ ವಿರುದ್ಧ ಪಂದ್ಯದಲ್ಲಿ ಎರಡು ಸುಲಭದ ಕ್ಯಾಚ್‌ಗಳನ್ನು ಡ್ರಾಪ್ ಮಾಡಿದ ಅಭಿಷೇಕ್
Team India : ತಮ್ಮ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದ ಟೀಮ್ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಇಂದು ಟ್ರೋಲ್ಗೆ ಗುರಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಅಂಗಳದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ನೀಡಿದ ಕಳಪೆ ಪ್ರದರ್ಶನದಿಂದಾಗಿ, ಅಭಿಮಾನಿಗಳಿಂದ ಅಭಿಷೇಕ್ ಶರ್ಮಾ ತೀವ್ರ ಟೀಕೆಗಳಿಗೆ ಗುರಿಯಾಗಿದ್ದಾರೆ.
ಹೌದು, 2026ರ T20 ವಿಶ್ವಕಪ್‌ನಲ್ಲಿ ಸೂಪರ್-8 ಹಂತದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಎರಡು ಸುಲಭದ ಕ್ಯಾಚ್‌ಗಳನ್ನು ಡ್ರಾಪ್ ಮಾಡಿದ ಅಭಿಷೇಕ್ ಶರ್ಮಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ಗೆ ಒಳಗಾಗಿದ್ದಾರೆ.
ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ತಮ್ಮ ಕಳಪೆ ಫೀಲ್ಡಿಂಗ್ ಮತ್ತು ಬ್ಯಾಟಿಂಗ್ನಿಂದಾಗಿ ಭಾರೀ ಟೀಕೆಗಳನ್ನು ಎದುರಿಸುವಂತಾಗಿದೆ. ಅಭಿಷೇಕ್ ಒಂದೇ ಇನ್ನಿಂಗ್ಸ್‌ನಲ್ಲಿ ಎರಡೂ ಸುಲಭದ ಕ್ಯಾಚ್‌ಗಳನ್ನು ಕೈಚೆಲ್ಲಿದರು, ಇದು ಪಂದ್ಯ ವೀಕ್ಷಿಸಲು ನೆರೆದಿದ್ದ ಅಭಿಮಾನಿಗಳನ್ನು ಕೋಪಗೊಳ್ಳುವಂತೆ ಮಾಡಿತು.
ಎರಡೆರಡೂ ಕ್ಯಾಚ್‌ಗಳನ್ನು ಬಿಟ್ಟಿದಲ್ಲದೇ, ಬ್ಯಾಟಿಂಗ್ನಲ್ಲೂ ಸಹ ಅಭಿಷೇಕ್ ಶರ್ಮಾ ಕೇವಲ 10 ರನ್ ಗಳಿಸಿ ಔಟಾದರು. ಭಾರತ ತಂಡ ಗೆಲ್ಲಲೇಬೇಕಾದ ಮಹತ್ವದ ಪಂದ್ಯದಲ್ಲಿ, ಅಭಿಮಾನಿಗಳಿಗೆ ತೀವ್ರ ನೀರಾಸೆ ಮೂಡಿಸಿ ಈಗ ಅವರ ಕೋಪಕ್ಕೆ ಗುರಿಯಾಗಿದ್ದಂತೂ ಸುಳ್ಳಲ್ಲ.
ಪಂದ್ಯದ ವಿಚಾರಕ್ಕೆ ಬರುವುದಾದರೆ, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ, ವಿಂಡೀಸ್ ಪಡೆಗೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು. ಅಂತೆಯೇ ಬ್ಯಾಟಿಂಗ್ಗಿಳಿದ ವೆಸ್ಟ್ ಇಂಡೀಸ್ ದೈತ್ಯರು, 20 ಓವರ್ನಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸೂರ್ಯ ಪಡೆಗೆ, ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಇನ್ನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಚೇಸಿಂಗ್ನಲ್ಲಿ ವಿರಾಟ್ ಕೊಹ್ಲಿ ಬಿಟ್ಟರೆ ಸ್ಯಾಮ್ಸನ್ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದಿದ್ದು ವಿಶೇಷ.
ಇದೇ ಸಮಯದಲ್ಲಿ ಕೇವಲ 10 ರನ್ಗೆ ಪೆವಿಲಿಯನ್ ಹಾದಿ ಹಿಡಿದ ಸ್ಫೋಟಕ ಎಡಗೈ ಬ್ಯಾಟರ್ಗಳಾದ ಅಭಿಷೇಕ್ ಶರ್ಮ ಮತ್ತು ಇಶಾನ್ ಕಿಶನ್ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರಿಯರನ್ನು ಮತ್ತೊಮ್ಮೆ ಭಾರೀ ನಿರಾಶೆಗೊಳಿಸಿದರು. ಉಳಿದಂತೆ ಕ್ರೀಸ್ಗೆ ಬಂದ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಹೆಚ್ಚು ಕಾಲ ನಿಲ್ಲಲಿಲ್ಲ. ಆದರೆ, ಏಕಾಂಗಿಯಾಗಿ ಹೋರಾಟ ನಡೆಸಿದ ಸಂಜು, ಇಡೀ ಪಂದ್ಯದ ಪೂರ ಕೂಲ್ ಆಗಿಯೇ ಚೇಸ್ ಮಾಡಿದ್ದು ನಿಜಕ್ಕೂ ರೋಮಾಂಚಕಕಾರಿ ಆಗಿತ್ತು. ಕಡೆಯ 2 ಓವರ್ನಲ್ಲಿ ಸ್ಯಾಮ್ಸನ್ ಮೇಲಿದ್ದ ಒತ್ತಡವನ್ನು ಇಳಿಸಿದ್ದೇ ಶಿವಂ ದುಬೆ ಅವರ ಎರಡು ಬೌಂಡರಿಗಳು. ಕೇವಲ 50 ರನ್ಗೆ 97 ರನ್ ಬಾರಿಸಿದ ಸಂಜು ಸ್ಯಾಮ್ಸನ್, ಟೀಮ್ ಇಂಡಿಯಾದ ರೋಚಕ ಗೆಲುವಿನ ರೂವಾರಿ. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿವೆ. ತನ್ನ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಭಾರತವನ್ನು ಸೆಮಿಫೈನಲ್ಗೆ ಕೊಂಡೊಯ್ದ ಸಂಜುಗೆ ಇಡೀ ಭಾರತೀಯ ಕ್ರಿಕೆಟ್ ಪ್ರಿಯರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, (ಏಜೆನ್ಸೀಸ್).