ಲಂಕಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಸ್ಟಾರ್ ವೇಗಿ ಫಿಟ್! 
ಕ್ರಿಕೆಟ್

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಸ್ಟಾರ್ ವೇಗಿ ಫಿಟ್!

ನವದೆಹಲಿ: ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಲಭ್ಯರಾಗಲಿದ್ದಾರೆ. ಬೆಂಗಳೂರಿನಲ್ಲಿರುವ ಬಿಸಿಸಿಐ ಶ್ರೇಷ್ಠತಾ ಕೇಂದ್ರದ (ಸಿಒಇ) ಫಿಟ್ನೆಸ್ ಟೆಸ್ಟ್‌ನಲ್ಲಿ ಉತ್ತೀರ್ಣಗೊಂಡು ಹಸಿರು ನಿಶಾನೆ ಪಡೆದುಕೊಂಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ 2ನೇ ಏಕದಿನ ವೇಳೆ ಗಾಯದ ಸಮಸ್ಯೆ ಎದುರಿಸಿದ್ದ ನಡುವೆಯೂ ಆಗಸ್ಟ್ 15ರಂದು ಆರಂಭವಾಗಲಿರುವ ಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ‘ಜಸ್‌ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಸಿಒಇಯ ನಿಗದಿತ ಫಿಟ್ನೆಸ್ ಟೆಸ್ಟ್‌ನಲ್ಲೂ ಪಾಸಾಗಿದ್ದಾರೆ.


ತಂಡದ ಮುಂಬರುವ ಯೋಜನೆಗಳಲ್ಲಿ ಅವಿಭಾಜ್ಯ ಅಂಗವಾಗಿರುವ ಬುಮ್ರಾ ಎರಡು ಪಂದ್ಯ ಆಡುವ ವಿಶ್ವಾಸವಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ (ಡಬ್ಲುೃಟಿಸಿ) 4ನೇ ಆವೃತ್ತಿಯಲ್ಲಿ ಫೈನಲ್‌ಗೆ ಅರ್ಹತೆ ಪಡೆಯಲು, ಮುಂದಿನ 9ರಲ್ಲಿ 7 ಟೆಸ್ಟ್ ಗೆಲ್ಲುವ ಸವಾಲು ಭಾರತದ ಮುಂದಿದೆ.