- ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ವೈಭವ್ ಸೂರ್ಯವಂಶಿ ಅವರಿಂದ ಅಮೋಘ ಇನ್ನಿಂಗ್ಸ್
- 14 ವರ್ಷದ ಆರಂಭಿಕ ಬ್ಯಾಟರ್ನ ಅಬ್ಬರದ ಇನ್ನಿಂಗ್ಸ್ಗೆ ಕ್ರಿಕೆಟ್ ಲೋಕ ಫಿದಾ (80 ಎಸೆತಗಳಲ್ಲಿ 175 ರನ್)
- ಒಂದೇ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್ ಮತ್ತು 15 ಬೌಂಡರಿ
- ಅಂಡರ್-19 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕವಿದು
ನವದೆಹಲಿ: ಐಪಿಎಲ್ 18ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಸ್ಫೋಟಕ ಓಪನಿಂಗ್ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿದ್ದ ಟೀಮ್ ಇಂಡಿಯಾ ಯುವ ಆಟಗಾರ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi), ಕೇವಲ 14ನೇ ವಯಸ್ಸಿಗೆ ತಮ್ಮ ಅಬ್ಬರದ ಬ್ಯಾಟಿಂಗ್ ಶೈಲಿಯಿಂದ ಇಡೀ ಕ್ರಿಕೆಟ್ ಲೋಕವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದರು. ಈಗ ಮತ್ತೊಮ್ಮೆ ಅದೇ ರೀತಿ ಮಾಡಿರುವುದು ಗಮನಾರ್ಹ.
ಇಂದು (ಫೆ.06) ಹರಾರೆಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ವೈಭವ್ ಭರ್ಜರಿ ಶತಕ ಸಿಡಿಸಿದ್ದಾರೆ. ಫೈನಲ್ ಪಂದ್ಯದಲ್ಲಿ, ಸೂರ್ಯವಂಶಿ ಅವರು ರಾಲ್ಫಿ ಆಲ್ಬರ್ಟ್ ಬೌಲಿಂಗ್‌ನಲ್ಲಿ ಸಿಂಗಲ್ ಗಳಿಸುವ ಮೂಲಕ ಕೇವಲ 55 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ, ಅಂಡರ್-19 ವಿಶ್ವಕಪ್‌ನಲ್ಲಿ ಅತ್ಯಂತ ವೇಗವಾಗಿ ಸೆಂಚುರಿ ದಾಖಲಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕೇವಲ ಸ್ಫೋಟಕ ಶತಕಕ್ಕೆ ಮಾತ್ರ ಸುಮ್ಮನಾಗದ 'ಬೇಬಿ ಬಾಸ್', ಕ್ರಿಕೆಟ್ ಪ್ರಿಯರು ಸ್ಟೇಡಿಯಂನಲ್ಲಿ ಕುಣಿದು ಕುಪ್ಪಳಿಸುವಂತ ಇನ್ನಿಂಗ್ಸ್ ಆಡಿದ್ದು ವಿಶೇಷ. ಕೇವಲ 80 ಎಸೆತಗಳಲ್ಲಿ 15 ಸಿಕ್ಸರ್ ಮತ್ತು 15 ಬೌಂಡರಿ ನೆರವಿನಿಂದ 175 ರನ್ ಕಲೆಹಾಕಿದ ಸೂರ್ಯವಂಶಿ, ಈ ಮೂಲಕ ಅಂಡರ್-19 ವಿಶ್ವಕಪ್‌ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ಭಾರತದ ಮೊದಲ ಆಟಗಾರನೆಂಬ ಹೆಗ್ಗಳಿಕೆಯ ಜತೆಗೆ ವಿಶ್ವದಲ್ಲಿ ಎರಡನೇ ಆಟಗಾರನೆಂಬ ದಾಖಲೆ ಬರೆದಿದ್ದಾರೆ. ಇದೊಂದು ಶತಕದ ಮೂಲಕ ವೈಭವ್ ಹಲವಾರು ದಾಖಲೆಗಳನ್ನು ಉಡೀಸ್ ಮಾಡಿದ್ದಾರೆ ಎಂಬುದು ಮತ್ತೊಂದು ವಿಶೇಷ.
ಯಾವೆಲ್ಲ ದಾಖಲೆ ಬ್ರೇಕ್?
- ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ 150ಕ್ಕೂ ಅಧಿಕ ರನ್ ಗಳಿಸಿದ ಮೊದಲ ಆಟಗಾರ
- ಫೈನಲ್‌ನಲ್ಲಿ ಭಾರತೀಯ ಆಟಗಾರನಿಂದ ಬಂದ ಅತಿ ವೇಗದ ಶತಕ (55 ಎಸೆತ)
- ಒಂದೇ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್
- ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಬೌಂಡರಿಗಳೊಂದಿಗೆ 150 ರನ್ (15 ಸಿಕ್ಸರ್, 15 ಬೌಂಡರಿ)
- ಒಟ್ಟು 449 ರನ್‌ಗಳಿಂದ ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
- ಇಡೀ ಟೂರ್ನಿಯಲ್ಲಿ 30 ಸಿಕ್ಸರ್‌ಗಳನ್ನು ಬಾರಿಸಿದ ಹೊಸ ದಾಖಲೆ