ಟ್ರೋಲ್ಗೆ ಗುರಿಯಾದ ವಿರಾಟ್ ಕೊಹ್ಲಿ
- ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ
- ಕ್ರಿಕೆಟ್ ಲೋಕದಲ್ಲಿ ರಾಜನಾಗಿ ಮೆರೆಯುತ್ತಿರುವ ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದಾರೆ
- ತಾಜಾ ಸಂಗತಿ ಏನೆಂದರೆ, ಇತ್ತೀಚೆಗೆ ವಿರಾಟ್ ಕೊಹ್ಲಿಯವರು ಟ್ರೋಲ್ಗೆ ಗುರಿಯಾಗಿದ್ದಾರೆ
ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ( Virat Kohli ) ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಅಂಡರ್-19 ತಂಡದಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಮ್ ಇಂಡಿಯಾಗೆ ಲಗ್ಗೆ ಇಟ್ಟ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ ಯುಗ ಮುಗಿದ ನಂತರ ನಾಯಕತ್ವ ವಹಿಸಿಕೊಂಡರು. ಅಲ್ಲದೆ, ಭಾರತಕ್ಕೆ ದೊಡ್ಡ ಗೆಲುವುಗಳನ್ನು ನೀಡಿದ್ದಾರೆ. ಅದೇ ಸಮಯದಲ್ಲಿ, ತಮ್ಮ ಸ್ವಂತ ದಾಖಲೆಗಳನ್ನು ಸಹ ಕೊಹ್ಲಿ ಸೃಷ್ಟಿಸಿದ್ದಾರೆ. ಕ್ರಿಕೆಟ್ ಲೋಕದಲ್ಲಿ ರಾಜನಾಗಿ ಮೆರೆಯುತ್ತಿರುವ ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದಾರೆ.
ತಾಜಾ ಸಂಗತಿ ಏನೆಂದರೆ, ಇತ್ತೀಚೆಗೆ ವಿರಾಟ್ ಕೊಹ್ಲಿಯವರು ಟ್ರೋಲ್ಗೆ ಗುರಿಯಾಗಿದ್ದಾರೆ. ಅವರು ಈ ಹಿಂದೆ ಧರಿಸಿದ್ದ ಟೀ-ಶರ್ಟ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಹೌದು, ವಿರಾಟ್ ಕೊಹ್ಲಿ ಟಿ-ಶರ್ಟ್‌ನಲ್ಲಿ ಅಶ್ಲೀಲ ಚಿತ್ರಗಳು ಕಾಣಿಸಿಕೊಂಡಿವೆ. ಈ ಘಟನೆ ಸುಮಾರು ವರ್ಷಗಳ ಹಿಂದೆ ಅಥವಾ ಐಪಿಎಲ್ ಆರಂಭದಲ್ಲಿ ನಡೆದಿರುವಂತೆ ತೋರುತ್ತದೆ. ವಿರಾಟ್ ಕೊಹ್ಲಿ ಮತ್ತು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿನಯ್ ಕುಮಾರ್, ನಟಿ ರಮ್ಯಾ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಟಿ-ಶರ್ಟ್‌ನಲ್ಲಿ ಅಶ್ಲೀಲ ಚಿತ್ರಗಳಿವೆ. ನಾಲ್ಕು ಗೋಡೆಗಳ ನಡುವೆ ನಡೆಯುವುದು ಕೊಹ್ಲಿ ಧರಿಸಿರುವ ಟಿ-ಶರ್ಟ್ ಮೇಲಿದೆ. ಹಳೆಯ ಫೋಟೋವನ್ನು ಹುಡುಕಿ ತಂದಿರುವ ಟ್ರೋಲಿಗರು ಜಾಲತಾಣದಲ್ಲಿ ಮೀಮ್ಸ್ ಹರಿಬಿಟ್ಟಿದ್ದಾರೆ.
ಫೋಟೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಇಂಥಾ ಟೀ ಶರ್ಟ್ ಧರಿಸಿದ್ರಾ ಎಂದು ಹುಬ್ಬೇರಿಸುತ್ತಿದ್ದಾರೆ. ಓರ್ವ ಸೆಲೆಬ್ರಿಟಿಯಾಗಿ ವಿರಾಟ್ ಕೊಹ್ಲಿ ಅವರು ಇಂತಹ ಅಶ್ಲೀಲ ಚಿತ್ರಗಳು ಮತ್ತು ಟಿ-ಶರ್ಟ್‌ಗಳನ್ನು ಧರಿಸಬಾರದಿತ್ತು ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ, ಕೆಲವರು ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ. ಕಂಪನಿ ನೀಡಿದ ವಿನ್ಯಾಸವನ್ನು ದೂಷಿಸಬೇಕೇ ಹೊರತು ಅದನ್ನು ಧರಿಸಿದ ವಿರಾಟ್ ಕೊಹ್ಲಿಯನ್ನಲ್ಲ ಎಂದು ಹೇಳುತ್ತಿದ್ದಾರೆ.
ಅಂದಹಾಗೆ, ಟಿ20 ಮತ್ತು ಟೆಸ್ಟ್ ಪಂದ್ಯಗಳಿಂದ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ, ಏಕದಿನ ಪಂದ್ಯಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಕೊಹ್ಲಿ 2027ರ ಏಕದಿನ ವಿಶ್ವಕಪ್ವರೆಗೆ ಟೀಮ್ ಇಂಡಿಯಾ ಪರ ಆಡುವ ಮತ್ತು ನಂತರ ನಿವೃತ್ತಿ ಹೊಂದುವ ಬಯಕೆಯಲ್ಲಿದ್ದಾರೆ. ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ನಡುವಿನ ಏಕದಿನ ಸರಣಿ ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಸಂದರ್ಭದಲ್ಲಿ, ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಶರ್ಮ ಕೂಡ ಕಣಕ್ಕೆ ಇಳಿಯಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಈ ವರ್ಷ ಒಟ್ಟು 18 ಏಕದಿನ ಪಂದ್ಯಗಳನ್ನು ಆಡಲಿದ್ದಾರೆ, (ಏಜೆನ್ಸೀಸ್).