ಬೆಂಗಳೂರು: ರಾಜ್ಯಮಟ್ಟದ ದಸರಾ ಮುಖ್ಯಮಂತ್ರಿ ಕಪ್ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಂಗಳೂರು ನಗರ ಮತ್ತು ಮೈಸೂರು ತಂಡಗಳು ಕ್ರಮವಾಗಿ ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿವೆ.
ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯ ಹಾಕಿ ಪೆವಿಲಿಯನ್ನಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಬೆಂಗಳೂರು ನಗರ ಪ್ರಥಮ, ಮೈಸೂರು ವಿಭಾಗ ದ್ವೀತಿಯ ಮತ್ತು ಬೆಂಗಳೂರು ಗ್ರಾಮಾಂತರ ತಂಡ ತೃತೀಯ ಸ್ಥಾನ ಗಳಿಸಿತು.
ಮಹಿಳೆಯರ ವಿಭಾಗದಲ್ಲಿ ಮೈಸೂರು ತಂಡ ಪ್ರಶಸ್ತಿ ಗೆದ್ದುಕೊಂಡರೆ, ಬೆಂಗಳೂರು ನಗರ ತಂಡ ದ್ವೀತಿಯ ಮತ್ತು ಬೆಂಗಳೂರು ಗ್ರಾಮಾಂತರ ತಂಡ ತೃತೀಯ ಬಹುಮಾನ ಗೆದ್ದುಕೊಂಡಿತು.