ನವದೆಹಲಿ: ಭಾರತದ ಆಲ್ರೌಂಡರ್ ದೀಪ್ತಿ ಶರ್ಮ 2023ರ ಡಿಸೆಂಬರ್ ತಿಂಗಳ ಐಸಿಸಿ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುರುಷರ ವಿಭಾಗದಲ್ಲಿ ಆಸ್ಟ್ರೆಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ಮತ್ತು ಆಸೀಸ್ ವಿರುದ್ಧದ ಮಹಿಳೆಯರ ಟೆಸ್ಟ್ನಲ್ಲಿ ಮಿಂಚಿದ್ದ ದೀಪ್ತಿ ದೇಶಬಾಂಧವೆ ಜೆಮೀಮಾ ರೋಡ್ರಿಗಸ್ರನ್ನು ಹಿಂದಿಕ್ಕಿ ಈ ಪ್ರಶಸ್ತಿ ಗೌರವ ಪಡೆದಿದ್ದಾರೆ.