ಕ್ರೀಡೆ

ಪಂಜಾಬ್ ವಿರುದ್ಧ ಆರು ವಿಕೆಟ್‌ಗಳ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್​| IPL 2025

IPL 2025: ಜೈಪುರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡವು ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು. ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್​, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟಿಂಗ್​ ಆರಂಭಿಸಿದ ಪಂಜಾಬ್ ತಂಡವು 20 ಓವರ್‌ಗಳಲ್ಲಿ 206 ರನ್ ಗಳಿಸುವ ಮೂಲಕ ಉತ್ತಮ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ 19.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ 6 ವಿಕೆಟ್ ಜಯ ಸಾಧಿಸಿತು.