IPL 2025: ಪಂಜಾಬ್ ಕಿಂಗ್ಸ್ ತಂಡವು ಇಂದು (24) ಜೈಪುರದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುವ ಮೂಲಕ 11 ವರ್ಷಗಳಲ್ಲಿ ಮೊದಲ ಬಾರಿಗೆ ಅಗ್ರ-ಎರಡು ಸ್ಥಾನಗಳನ್ನು ಪಡೆಯುವ ಗುರಿಯನ್ನು ಹೊಂದಿದೆ.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನೂ ಪಂಜಾಬ್ ಮೊದಲು ಬ್ಯಾಟಿಂಗ್ ಆರಂಭಿಸಿದೆ.
ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಹಾದಿಯಿಂದ ಹೊರಬಿದ್ದಿರುವ ಡೆಲ್ಲಿ ಹಾಗೂ ಪ್ಲೇ ಆಫ್ ಪ್ರವೇಶಿಸಿರುವ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ.