ಕ್ರೀಡೆ

IPL 2024: ಡೆಲ್ಲಿ ವಿರುದ್ಧ ಟಾಸ್​​ ಗೆದ್ದ ಕೆಕೆಆರ್ ಬ್ಯಾಟಿಂಗ್​ ಆಯ್ಕೆ

ವಿಶಾಖಪಟ್ಟಣ: ಐಪಿಎಲ್​ 17ನೇ ಸೀಸನ್​ನ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೆಕೆಆರ್ ತಂಡದ ನಾಯಕ ಶ್ರೇಯಸ್​ ಅಯ್ಯರ್​ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಇದೇ ಕ್ರೀಡಾಂಗಣದಲ್ಲಿ 'ಚಾಂಪಿಯನ್' ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಧೋನಿಯ ಭರ್ಜರಿ ಬ್ಯಾಟಿಂಗ್ ಸವಾಲನ್ನೂ ಗೆದ್ದಿದ್ದ ರಿಷಭ್ ಬಳಗ ಟೂರ್ನಿಯಲ್ಲಿ ಪ್ರಥಮ ಗೆಲುವು ಸಾಧಿಸಿತ್ತು.

ಆತ್ಮವಿಶ್ವಾಸದಲ್ಲಿರುವ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ಸವಾಲು ಎದುರಿಸಲು ಸಿದ್ಧವಾಗಿದೆ. ಅಯ್ಯರ್ ಬಳಗವು ಇದುವರೆಗೆ ಆಡಿರುವ ಎರಡೂ ಪಂದ್ಯಗಳಲ್ಲಿ ಜಯಿಸಿದೆ. ಆರ್​​ಸಿಬಿ ತಂಡದ ವಿರುದ್ಧ ಅಮೋಘ ಜಯ ಸಾಧಿಸಿರುವ ಶ್ರೇಯಸ್​ ಅಯ್ಯರ್ ಬಳಗವು ಇಲ್ಲಿಗೆ ಬಂದಿಳಿದಿದೆ.

ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಒಟ್ಟು 32 ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ ತಂಡವು 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 15 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.