ನವದೆಹಲಿ: ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 10 ರನ್‌ಗಳ ರೋಚಕ ಗೆಲುವು ದಾಖಲಿಸಿತು. ಮುಂಬೈ ಇಂಡಿಯನ್ಸ್ಗೆ ಮತ್ತೆ ಮುಖಭಂಗ ಅನುಭವಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 257 ರನ್ ಗಳಿಸಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಮುಂಬೈ 247 ರನ್ ಗಳಿಸಲಷ್ಟೆ ಶಕ್ತವಾಯಿತು. ಈ ಮೂಲಕ ಡೆಲ್ಲಿ 10 ರನ್‌ಗಳ ಗೆಲುವು ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 257 ರನ್ ಗಳಿಸಿತು. ಐಪಿಎಲ್ ಇತಿಹಾಸದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಇದೇ ಮೊದಲ ಬಾರಿಗೆ 250 ರನ್ ಗಳಿಸಿದ ದಾಖಲೆ ಬರೆಯಿತು.