ನ್ಯೂಯಾರ್ಕ್: ಟಿ20 ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾ ಅಮೆರಿಕದಲ್ಲಿ ಬೀಡುಬಿಟ್ಟಿದೆ. ಈ ಬಾರಿ ಕಪ್‌ನೊಂದಿಗೆ ಭಾರತಕ್ಕೆ ಮರಳುವ ನಿರೀಕ್ಷೆಯಲ್ಲಿದೆ. ಹೀಗಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದೆ. ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿತು ಮತ್ತು ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಮಿಂಚಿದರು. ಜೂನ್ 1ರಿಂದ ಟೂರ್ನಿ ಅರಂಭವಾಗಿದ್ದು, ಜೂ.05ರಂದು ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ತನ್ನ ಮೊದಲ ಲೀಗ್ ಪಂದ್ಯವನ್ನು ಎದುರಿಸಲಿದೆ. ಇದಕ್ಕೂ ಮುನ್ನವೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಿರು ವಿಶ್ವಕಪ್ ಅಂಗವಾಗಿ ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೇ ಇದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಿತು. ಆದರೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಈ ಮೈದಾನದಲ್ಲಿ ಆಡುವಾಗ ತುಂಬಾ ಎಚ್ಚರಿಕೆ ವಹಿಸುವಂತೆ ತಂಡಕ್ಕೆ ಸಲಹೆ ನೀಡಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಮ್ಮ ಆಟಗಾರರು ಸಂಪೂರ್ಣ ಪ್ರಾಬಲ್ಯ ಮೆರೆದರು. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಮಿಂಚಿದರು. ಪಿಚ್ ಹೇಗೆ ಬದಲಾಗುತ್ತದೆ ಎಂಬುದರ ಬಗ್ಗೆ ನಮಗೆ ಅರಿವು ಮೂಡಿದೆ. ಈ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಆಟಗಾರರು ತುಂಬಾ ಜಾಗರೂಕರಾಗಿರಬೇಕು. ಏಕೆಂದರೆ, ಗಾಯಗಳಾಗುವ ಸಾಧ್ಯತೆ ಇದೆ. ಹೀಗಾಗಿ ತುಂಬಾ ಎಚ್ಚರಿಕೆ ವಹಿಸಿ ಎಂದು ಮೊದಲ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾ ಆಟಗಾರರಿಗೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ. ಇಂತಹ ಮೈದಾನಗಳಲ್ಲಿ ಆಟಗಾರರು ಗಾಯಗೊಳ್ಳುವ ಸಾಧ್ಯತೆಗಳಿವೆ ಎಂಬುದನ್ನು ದ್ರಾವಿಡ್ ಮೊದಲೇ ಗ್ರಹಿಸಿದ್ದಾರೆ.
ಇದೇ ವೇಳೆ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಮತ್ತೊಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಇಡೀ ವಿಶ್ವವೇ ಕಾಯುತ್ತಿರುವ ಭಾರತ-ಪಾಕ್ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ. ಆಟಗಾರರಿಗೆ ಗಾಯವಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಭಾವಿಸಿ ರಾಹುಲ್ ದ್ರಾವಿಡ್ ಈ ಸಲಹೆಗಳನ್ನು ನೀಡಿದ್ದಾರೆ.
ಇನ್ನು ಈ ಮೆಗಾಟೂರ್ನಮೆಂಟ್‌ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ಅನ್ನು ಎದುರಿಸಲಿದೆ. ಈ ಪಂದ್ಯ ಜೂನ್ 5 ರಂದು ನಡೆಯಲಿದ್ದು, ಜೂ. 9ರಂದು ಪಾಕ್ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. (ಏಜೆನ್ಸೀಸ್)