ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ED) ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಸಮನ್ಸ್ ಜಾರಿ ಮಾಡಿದೆ ಎಂದು ಮಂಗಳವಾರ ವರದಿಯಾಗಿದೆ.
ಉತ್ತಪ್ಪ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಲು ಕೇಳಲಾಗಿದೆ ಎಂದು ಪಿಟಿಐ ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:ನಮ್ಮ ಸೇನಾ ಪಡೆಗಳು ನಡೆಸಿದ ಭಾರೀ ದಾಳಿಗೆ ಗಾಜಾ ಉರಿಯುತ್ತಿದೆ ಎಂದ ಇಸ್ರೇಲ್ ರಕ್ಷಣಾ ಸಚಿವ| Israel Katz
ಈ ಪ್ರಕರಣದಲ್ಲಿ ದೆಹಲಿಯಲ್ಲಿ ಸಮನ್ಸ್ ಜಾರಿಯಾದ ಮೂರನೇ ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ. ಇದಕ್ಕೂ ಮೊದಲು, ಫೆಡರಲ್ ತನಿಖಾ ಸಂಸ್ಥೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿತ್ತು.
ಪ್ರಕರಣದಲ್ಲಿ ಉತ್ತಪ್ಪ (39), ಯುವರಾಜ್ ಸಿಂಗ್ (43) ಮತ್ತು ಸೂದ್ (52) ಮುಂದಿನ ವಾರದೊಳಗೆ ಸಾಕ್ಷಿ ಹೇಳಲು ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸಲು ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ, ಜಾರಿ ನಿರ್ದೇಶನಾಲಯವು ಈ ಪ್ರಕರಣದಲ್ಲಿ ಮಾಜಿ ಟಿಎಂಸಿ ಸಂಸದೆ ಮತ್ತು ನಟಿ ಮಿಮಿ ಚಕ್ರವರ್ತಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. (ಏಜೆನ್ಸೀಸ್)