ಕಲ್ಕತ್ತಾ: ಐಪಿಎಲ್ ಆರಂಭವಾಗುವುದಲ್ಲೂ ಮುನ್ನ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯಾಕೋ ತಂಡದಲ್ಲಿ ಎಲ್ಲವೂ ಸರಿ ಇಲ್ಲವೆಂಬಂತೆ ಕಾಣುತ್ತಿದೆ. ಇದೀಗ ಅದಕ್ಕೆ ಪೂರಕವೆಂಬಂತೆ ಮತ್ತೊಂದು ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಕಲ್ಕತ್ತಾ ನೈಟ್ರೈಡರ್ಸ್ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರೊಂದಿಗೆ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತ್ತೊಂದು ಸುತ್ತಿನ ಚರ್ಚೆಯನ್ನು ಹುಟ್ಟುಹಾಕಿದೆ.
ಇದನ್ನೂ ಓದಿ: OYO ರೂಮ್ಗಳನ್ನು ತೆರೆಸುವಂತೆ ಬಿಜೆಪಿ ಶಾಸಕರ ಕಚೇರಿ ಮುಂದೆ ವಿಭಿನ್ನವಾಗಿ ಪ್ರತಿಭಟಿಸಿದ ಪ್ರೇಮಿಗಳು; ವಿಡಿಯೋ ವೈರಲ್
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಇಲ್ಲಿ ಪ್ರತಿಯೊಂದು ಬದಲಾಗುತ್ತಿದೆ. ಎಲ್ಲಾ ಅವರ ಕೈಯಲ್ಲಿದೆ. ಆದರೆ, ನಾನು ಯಾವುದಕ್ಕೂ ಗಮನ ಕೊಡುವುದಿಲ್ಲ ಎಂದು ಹೇಳುತ್ತಿರುವುದನ್ನು ನೋಡಬಹುದಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಮುಂಬೈ ಪಾಳಯದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಇತ್ತ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಮುಂದಿನ ಬಾರಿ ದಯವಿಟ್ಟು ಮುಂಬೈ ಬಿಟ್ಟು ಬೇರೆ ತಂಡವನ್ನು ಕೂಡಿಕೊಳ್ಳಿ. ಐದು ಬಾರಿ ಟ್ರೋಫಿ ಗೆಲ್ಲಿಸಿದರು ನಿಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡನೀಯ ಎಂದು ಹಲವರು ಕಮೆಂಟ್ ಮಾಡಿದ್ದಾರೆ.