ಕ್ರೀಡೆ

Emerging Asia Cup| ಅಜೇಯವಾಗಿ SemiFinal ಪ್ರವೇಶಿಸಿದ ಭಾರತ; ಮುಂದಿನ ಎದುರಾಳಿ ಯಾರು ಗೊತ್ತಾ?

ಓಮನ್​: ಓಮನ್​ ಆತಿಥ್ಯದಲ್ಲಿ ನಡೆಯುತ್ತಿರುವ ಎಮರ್ಜಿಂಗ್​ ಏಷ್ಯಾಕಪ್​ನಲ್ಲಿ (Emerging AsiaCup) ಭಾರತ ಎ (India A) ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ. ಆತಿಥೇಯ ಓಮನ್​ ವಿರುದ್ಧ ನಡೆದ ಪಂದ್ಯದಲ್ಲಿ 6 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಭಾರತ ಸೆಮಿಫೈನಲ್​ ಪ್ರವೇಶಿಸಿದೆ.

ಎಮರ್ಜಿಂಗ್​ ಏಷ್ಯಾಕಪ್​ನಲ್ಲಿ (Emerging AsiaCup) ನಡೆದ ಲೀಗ್​ ಹಂತದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಓಮನ್​ (Oman) ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 140 ರನ್​ ಗಳಿಸಿತ್ತು. ಆತಿಥೇಯರು ನೀಡಿದ ಗುರಿಯನ್ನು ಬೆನ್ನತ್ತಿದ್ದ ಭಾರತ ಎ (India A) ತಂಡವು ಆಯುಷ್​ ಬದೋನಿ (51 ರನ್, 27 ಎಸೆತ, 6 ಬೌಂಡರಿ, 2 ಸಿಕ್ಸರ್​) ಅರ್ಧಶತಕದ ಫಲವಾಗಿ ಗುರಿಯನ್ನು 15.2 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ ತಲುಪುವ ಮೂಲಕ ಗೆಲುವಿನ ನಗೆ ಬೀರಿತು.

ಸೆಮಿಫೈನಲ್​ನಲ್ಲಿ ಭಾರತದ ಎದುರಾಳಿ ಯಾರು? 

ಲೀಗ್​ ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎ ತಂಡವನ್ನು ಮಣಿಸಿದ್ದ ಭಾರತ ಆ ನಂತರದ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅನ್ನು ಸೋಲಿಸಿತ್ತು. ಈ ಮೂಲಕ ಭಾರತ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿದೆ. ಇದರಿಂದಾಗಿ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಎ ತಂಡವನ್ನು ಸೆಮಿಫೈನಲ್‌ನಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 25 ರಂದು ನಡೆಯಲಿದೆ. ಮೊದಲ ಸೆಮಿಫೈನಲ್‌ನಲ್ಲಿ ಎ ಗುಂಪಿನ ವಿಜೇತ ಶ್ರೀಲಂಕಾ ಎ ಮತ್ತು ಬಿ ಗುಂಪಿನ ನಂಬರ್ 2 ತಂಡ ಪಾಕಿಸ್ತಾನ ಎ ನಡುವೆ ಹಣಾಹಣಿ ನಡೆಯಲಿದೆ. ಈ ಪಂದ್ಯ ಕೂಡ ಅಕ್ಟೋಬರ್ 25 ರಂದೇ ನಡೆಯಲಿದೆ.