ಕೇಪ್‌ಟೌನ್: ಸ್ಫೋಟಕ ಬ್ಯಾಟ್ಸ್‌ಮನ್ ಜಾನಿ ಬೇರ್‌ಸ್ಟೋ (86*ರನ್, 48 ಎಸೆತ, 9 ಬೌಂಡರಿ, 4 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ಫಲವಾಗಿ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಎದುರು 5 ವಿಕೆಟ್‌ಗಳಿಂದ ಜಯ ದಾಖಲಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಯಿಂದ ಮುನ್ನಡೆ ಸಾಧಿಸಿತು.
ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಫಾಫ್ ಡು ಪ್ಲೆಸಿಸ್ (58 ರನ್, 40 ಎಸೆತ, 4 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್‌ಗೆ 179 ರನ್‌ಗಳಿಸಿದರೆ, ಪ್ರತಿಯಾಗಿ ಇಂಗ್ಲೆಂಡ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್‌ಗೆ 183 ರನ್‌ಗಳಿಸಿ ಗೆಲುವಿನ ನಗೆ ಬೀರಿತು. ಉಭಯ ತಂಡಗಳ ನಡುವಿನ 2ನೇ ಟಿ20 ಪಂದ್ಯ ಭಾನುವಾರ ನಡೆಯಲಿದೆ. ಜಾನಿ ಬೇರ್ ಸ್ಟೋ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದಕ್ಷಿಣ ಆಫ್ರಿಕಾ: 6 ವಿಕೆಟ್‌ಗೆ 179 (ಪ್ಲೆಸಿಸ್ 58, ವ್ಯಾರ್ ಡರ್ ಡುಸೆನ್ 37, ಕ್ಲಾಸೆನ್ 20, ಸ್ಯಾಮ್ ಕರ್ರನ್ 28ಕ್ಕೆ 3, ಜೋಫ್ರಾ ಆರ್ಚರ್ 28ಕ್ಕೆ 1, ಟಾಮ್ ಕರ್ರನ್ 55ಕ್ಕೆ 1, ಕ್ರೀಸ್ ಜೋರ್ಡಾನ್ 40ಕ್ಕೆ1). ಇಂಗ್ಲೆಂಡ್: 19.2 ಓವರ್‌ಗಳಲ್ಲಿ 5 ವಿಕೆಟ್‌ಗೆ 183 (ಜಾನಿ ಬೇರ್ ಸ್ಟೋ 86*, ಬೆನ್ ಸ್ಟೋಕ್ಸ್ 37, ಲಿಂಡೆ 20ಕ್ಕೆ 2, ಲುಂಗಿ ಎನ್‌ಗಿಡಿ 31ಕ್ಕೆ 2).