ಕ್ರೀಡೆ

ರಾಜಕೀಯಕ್ಕೆ ಎಂಟ್ರಿ ಕೊಟ್ಟ ಮಾಜಿ ಕ್ರಿಕೆಟಿಗ ಕೇದರ್​ ಜಾಧವ್​; ಯಾವ ಪಕ್ಷಕ್ಕೆ ಸೇರ್ಪಡೆ? | Kedar Jadhav

Kedar Jadhav : ಭಾರತೀಯ ಮಾಜಿ ಕ್ರಿಕೆಟ್​ ಆಟಗಾರ ಕೇದರ್​ ಜಾಧವ್​ ಮಹರಾಷ್ಟ್ರದಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ ಮಂಗಳವಾರ ಔಪಚಾರಿಕವಾಗಿ ಸೇರ್ಪಡೆಗೊಂಡಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ್ ಬವಾಂಕುಲೆ, ''ಕೇದಾರ್ ಜಾಧವ್ ನಮ್ಮ ರಾಷ್ಟ್ರೀಯ ಕ್ರಿಕೆಟ್ ಆಟಗಾರ. ಅವನಿಗೆ ಬಹಳಷ್ಟು ಅನುಯಾಯಿಗಳಿದ್ದಾರೆ. ಇಂದು ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಪ್ರಧಾನಿ ಮೋದಿಯವರೊಂದಿಗೆ ಸೇರಿಕೊಂಡಿದ್ದಕ್ಕೆ ಸಂತೋಷಪಡುತ್ತಾರೆ. ದೇಶದ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಪಕ್ಷ ಸೇರುತ್ತಿದ್ದೇನೆ ಎಂದು ಧೃಢನಿಶ್ಚಯ ಮಾಡಿದ್ದಾರೆ'' ಎಂದು ಹೇಳಿದ್ದರು.

ಕಳೆದ ವರ್ಷ ನಿವೃತ್ತಿ ಹೊಂದಿದ ಜಾಧವ್​

ಕೇದಾರ್ ಜಾಧವ್ ಕಳೆದ ವರ್ಷ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತರಾದರು. ಕೇದಾರ್ 2020 ರ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಪರ ಕೊನೆಯ ಪಂದ್ಯವನ್ನು ಆಡಿದರು. ಕೇದಾರ್ ಜಾಧವ್ 2014 ರಲ್ಲಿ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.(ಏಜೆನ್ಸೀಸ್​)