ನವದೆಹಲಿ: ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಮತ್ತು ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್ ಅವರು ಸೋಮವಾರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದರು.
ಇದನ್ನೂ ಓದಿ: ಸಿದ್ದು, ಡಿಕೆಶಿ ರಾಜೀನಾಮೆ ನೀಡಲಿ; ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಬಿಜೆಪಿ ಸಂಸದ ಕಾಗೇರಿ ಹೀಗೆ ಹೇಳಿದ್ದೇಕೆ?
2019ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಗೌತಮ್ ಗಂಭೀರ್ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಭಾರತ ತಂಡದ ಹೆಡ್ ಕೋಚ್ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿರುವ ಗಂಭೀರ್ ಸಕ್ರಿಯ ರಾಜಕಾರಣದಿಂದ ವಿರಾಮ ಪಡೆದಿದ್ದಾರೆ.
ಲೋಸಕಭೆ ಚುನಾವಣೆ ಯಶಸ್ಸಿಗೆ ಅಭಿನಂದನೆ ಸಲ್ಲಿಸಲು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರ ನಾಯಕತ್ವವು ನಮ್ಮ ರಾಷ್ಟ್ರದ ಭದ್ರತೆ ಮತ್ತು ಸ್ಥಿರತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಗಂಭೀರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿ20 ವಿಶ್ವಕಪ್ ನಂತರ ದ್ರಾವಿಡ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯುವುದಾಗಿ ಖಚಿತಪಡಿಸಿದ್ದಾರೆ.
ಹೊಸ ಕೋಚ್ ನೇಮಕಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಅಶೋಕ್ ಮಲ್ಹೋತ್ರಾ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಭಾರತದ ಮುಖ್ಯ ಕೋಚ್ ಹುದ್ದೆಗೆ ಇನ್ನೂ ಯಾವುದೇ ಆಸಕ್ತ ಅಭ್ಯರ್ಥಿಗಳನ್ನು ಸಂದರ್ಶಿಸಿಲ್ಲ ಎಂದು ತಿಳಿದು ಬಂದಿದೆ.