ನವದೆಹಲಿ: ಟೀಮ್ ಇಂಡಿಯಾದ ಅನುಭವಿ ಆರಂಭಿಕ, ಸ್ಫೋಟಕ ಬ್ಯಾಟ್ಸ್ಮನ್ ಶಿಖರ್ ಧವನ್ ಮಹತ್ವದ ಬೆಳವಣಿಗೆಯಲ್ಲಿ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸಳೆದಿರುವ ಧವನ್ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಹಲವು ದಾಖಲೆಗಳನ್ನು ಹೊಂದಿದ್ದಾರೆ. ಮುಖ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ಗರಿಕ್ಷರ್ಠ ರನ್ ಸ್ಕೋರರ್ ಆಗಿ ಹೊರಹೊಮ್ಮಿರುವ ಶಿಖರ್ ದಿಢೀರ್ ಎಂದು ನಿವೃತ್ತಿ ಘೋಷಿಸಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ.
201ರಲ್ಲಿ ಭಾರತದ ಪರ ಪದಾರ್ಪಣೆ ಮಾಡಿದ ಶಿಖರ್ ಧವನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ತಮ್,ಮ ವೃತ್ತಿ ಜೀವನದಲ್ಲಿ ಗಬ್ಬರ್ ಎಂದೇ ಕರೆಯಲ್ಪಡುತ್ತಿದ್ದ ಶಿಖರ್ ಕ್ರೀಸ್ನಲ್ಲಿರುವಾಗ ಎದುರಾಳಿಗಳಿಗೆ ನಡುಕವನ್ನು ಹುಟ್ಟಿಸುತ್ತಿದ್ದರು. ಹಾಗಿದ್ರೆ ಧವನ್ ಹೆಸರಿನಲ್ಲಿರುವ ವಿಶೇಷ ದಾಖಲೆಗಳಾವುವು ಎಂದು ನೋಡೋಣ ಬನ್ನಿ.
ಐಸಿಸಿ ನಡೆಸುವ ಟೂರ್ನಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಶಿಖರ್ ಅತಿ ವೇಗವಾಗಿ 1,000 ರನ್ ಕಲೆಹಾಕಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಧವನ್ 16 ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದಲ್ಲದೆ ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದ ಶಿಖರ್ 187 ರನ್ ಗಳಿಸುವ ಮೂಲಕ ವಿಶ್ವದಾಖಲೆ ಬರೆದಿದ್ದರು.
ಇದಲ್ಲದೆ 100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2004ರಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ 7 ಇನಿಂಗ್ಸ್ಗಳಿಂದ 505 ರನ್ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಸಿಸಿ ಏಕದಿನ ಟೂರ್ನಿಯಲ್ಲಿ 65ರ ಸರಾಸರಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಶಿಖರ್ ಧವನ್ ಹೆಸರಿನಲ್ಲಿದೆ.
2013ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಶಿಖರ್ ಧವನ್ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಶಿಖರ್ 114(94), 102*(107), 48(41), 68(92), 31(24), 68(65), 125(128), 78(83), 46( 34), 21(22) ರನ್ ಕಲೆಹಾಕಿದ್ದರು.