ಕ್ರೀಡೆ

ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಕುಟುಂಬ! gautam gambhir visits tirumala

gautam gambhir visits tirumala: ಇತ್ತೀಚೆಗೆ ತಿರುಮಲಕ್ಕೆ ದೇವರ ದರ್ಶನಕ್ಕೆ ಬರುವ ಕ್ರಿಕೆಟ್ ಆಟಗಾರರ ಸಂಖ್ಯೆಯೂ ಹೆಚ್ಚಾಗಿದೆ. ಐಪಿಎಲ್ ಋತುವಿನ ಆರಂಭದ ಮೊದಲು ಮತ್ತು ನಂತರ ತಿರುಮಲದಲ್ಲಿ ವೆಂಕಣ್ಣನ ಆಶೀರ್ವಾದ ಪಡೆಯಲು ಕ್ರಿಕೆಟಿಗರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಸ್ಟಾರ್ ಕ್ರಿಕೆಟಿಗರು, ಐಪಿಎಲ್ ಆಟಗಾರರು, ತರಬೇತುದಾರರು ಮತ್ತು ಫ್ರಾಂಚೈಸ್ ಮಾಲೀಕರು ತಿರುಮಲಕ್ಕೆ ಭೇಟಿ ನೀಡುವುದು ವಿಶೇಷ ಸಂದರ್ಭವಾಗಿದೆ.  ಇತ್ತೀಚೆಗೆ ಗೌತಮ್ ಗಂಭೀರ್ ಆಂಧ್ರಪ್ರದೇಶದ ವಿಶ್ವಪ್ರಸಿದ್ಧ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಗವಂತನ ಆಶೀರ್ವಾದ ಪಡೆಯಲು ಭೇಟಿ ನೀಡಿದರು.

ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ತಮ್ಮ ಪತ್ನಿ ಮತ್ತು ಪುತ್ರಿಯರೊಂದಿಗೆ ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ಗೌತಮ್ ಗಂಭೀರ್ ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲ್ಲಿಸಿದ್ದರು. ಅದಾದ ನಂತರ, ಅವರು ಈಗ ತಮ್ಮ ಕುಟುಂಬದೊಂದಿಗೆ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸದಸ್ಯರೊಂದಿಗೆ ಶ್ರೀವಾರಿ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡರು.   ಗಂಭೀರ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ಆರಂಭಕ್ಕೂ ಮುನ್ನ ಆಂಧ್ರಪ್ರದೇಶದ ಐಪಿಎಲ್ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರೆ, ಆರ್‌ಸಿಬಿ ತಂಡದ ನಾಯಕ ರಜತ್ ಪಟಿದಾರ್ ಮತ್ತು ಜಿತೇಶ್ ಶರ್ಮಾ, ಮಹಿಳಾ ಕ್ರಿಕೆಟಿಗ ಶ್ರೇಯಾಂಕ ಪಾಟೀಲ್, ಪಂಜಾಬ್ ತಂಡದ ಮಾಲೀಕೆ ಪ್ರೀತಿ ಜಿಂಟಾ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಕೂಡ ತಿರುಮಲದ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.