ಕ್ರೀಡೆ

ತಂದೆಯಾಗಿ ಬಡ್ತಿ ಪಡೆದ ಗ್ಲೆನ್​ ಮ್ಯಾಕ್ಸ್​ವೆಲ್; ಗಂಡು ಮಗುವಿಗೆ ಜನ್ಮ ನೀಡಿದ ವಿನಿ ರಾಮನ್​

ನವದೆಹಲಿ: ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಸ್ಟಾರ್​ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​​ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹಾಗೂ ಅವರ ಪತ್ನಿ ವಿನಿ ರಾಮನ್​ ಸೆಪ್ಟೆಂಬರ್​ 11ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ತಂದೆಯಾಗಿ ಬಡ್ತಿ ಪಡೆದಿದ್ದಾರೆ.

ವಿನಿ ರಾಮನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಇಬ್ಬರೂ ತಮ್ಮ ಮಗನೊಂದಿಗಿನ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ಮ್ಯಾಕ್ಸ್​ವೆಲ್​ ದಂಪತಿಗಳು 11.09.2023 | ಲೋಗನ್ ಮಾವೆರಿಕ್ ಮ್ಯಾಕ್ಸ್‌ವೆಲ್ ಎಂದು ತಮ್ಮ ಮಗುವಿನ ಹೆಸರನ್ನೂ ಬಹಿರಂಗಪಡಿಸಿದ್ದಾರೆ.

ಸೆಪ್ಟೆಂಬರ್ 11 ರಂದು ಮ್ಯಾಕ್ಸ್‌ವೆಲ್ ಪತ್ನಿ ವಿನಿ ರಾಮನ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಿಹಿ ಸುದ್ದಿ ಹೊರಬಿದ್ದ ನಂತರ, ವಿನಿ ಮತ್ತು ಮ್ಯಾಕ್ಸ್‌ವೆಲ್ ದಂಪತಿಗಳಿಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿನಂನೆ ಮಹಾಪೂರವೇ ಹರಿದುಬರುತ್ತಿದೆ. ಸೆಲೆಬ್ರಿಟಿಗಳಾದ ಅನುಷ್ಕಾ ಶರ್ಮಾ, ಧನಶ್ರೀ ಚಹಲ್​ ಮ್ಯಾಕ್ಸ್​ವೆಲ್​ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.