Retirement: ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್(Glenn Maxwell ) ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಸೋಮವಾರ ವಿದಾಯ ಘೋಷಿಸಿದ್ದಾರೆ. ಅದಾಗ್ಯೂ ಟಿ-20 ಮುಂದುವರೆಸುವುದಾಗಿ ತಿಳಿಸಿದ್ದಾರೆ.
36 ವರ್ಷ ವಯಸ್ಸಿನ ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾ ಪರ 149 ಏಕದಿನ ಪಂದ್ಯಗಳನ್ನು ಆಡಿದ್ದಾರೆ, 136 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ದ್ವಿಶತಕ ಹಾಗೂ 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಇವರು ಎರಡು ಏಕದಿನ ವಿಶ್ವಕಪ್‌ಗಳನ್ನು ಗೆದ್ದಿದ್ದಾರೆ.
ಇದನ್ನೂ ಓದಿ:ಆಲ್ಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಮಹಾ ಕ್ಯಾತೆ: ಡಿ.ಕೆ.ಶಿವಕುಮಾರ್ ಆಘಾತ | Don’t want to mix politics
2022ರಲ್ಲಿ ಉಂಟಾದ ಗಂಭೀರ ಕಾಲಿನ ಗಾಯದ ಪರಿಣಾಮಗಳನ್ನು ಇನ್ನೂ ಎದುರಿಸುತ್ತಿರುವ ಮ್ಯಾಕ್ಸ್‌ವೆಲ್, ಫೆಬ್ರವರಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಸಮಯದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಗಿ ಬಹಿರಂಗಪಡಿಸಿದರು. 2027ರ ಏಕದಿನ ವಿಶ್ವಕಪ್‌ಗೆ ತಾನು ಅರ್ಹತೆ ಪಡೆಯುವುದಿಲ್ಲ ಎಂದು ಆಸ್ಟ್ರೇಲಿಯಾದ ಮುಖ್ಯ ಆಯ್ಕೆದಾರ ಜಾರ್ಜ್ ಬೈಲಿಗೆ ತಿಳಿಸಿದ್ದಾರೆ. ಹೀಗಾಗಿ, ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸಿರುವುದಾಗಿ ಮ್ಯಾಕ್ಸ್‌ವೆಲ್ ಹೇಳಿದ್ದಾರೆ.(ಏಜೆನ್ಸೀಸ್)