ಅಡಿಲೇಡ್: ಇಲ್ಲಿನ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ವೆಸ್ಟ್ ಇಂಡೀಸ್ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಅತಿಥೇಯ ತಂಡದ ಪರ ಭರ್ಜರಿ ಶತಕ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಗ್ಲೆನ್ ಮ್ಯಾಕ್ಸ್‌ವೆಲ್ (120 ರನ್, 55 ಎಸೆತ, 12 ಬೌಂಡರಿ, 8 ಸಿಕ್ಸರ್) ಶತಕದ ಫಲವಾಗಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ತಂಡದ ಪರ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಮ್ಯಾಕ್ಸ್‌ವೆಲ್ ಟಿ-20 ಕ್ರಿಕೆಟ್ನಲ್ಲಿ ಹೊಸ ದಾಖಲೆಗಳನ್ನು ಬರೆದಿದ್ದಾರೆ.
55 ಎಸೆತಗಳಲ್ಲಿ 120 ರನ್ ಗಳಿಸಿದ ಮ್ಯಾಕ್ಸ್‌ವೆಲ್ ಟಿ-20 ಮಾದರಿಯಲ್ಲಿ ತಮ್ಮ ಐದನೇ ಶತಕವನ್ನು ಪೂರೈಸಿಕೊಂಡರು. ಈ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಈ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಆಟಗಾರರ ಪೈಕಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯ ರೋಹಿತ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಅಂತರಾಷ್ಟ್ರೀಯ ಟಿ20 ಪಂದ್ಯದಲ್ಲಿ ಐದನೇ ಶತಕ ಸಿಡಿಸುವ ಮೂಲಕ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದರು. 94 ಇನ್ನಿಂಗ್ಸ್ನಲ್ಲಿ ಮ್ಯಾಕ್ಸ್‌ವೆಲ್ ಈ ಸಾಧನೆ ಮಾಡಿದ್ದು, ಹಿಟ್ಮ್ಯಾನ್ 143 ಇನ್ನಿಂಗ್ಸ್ ಆಡಿ ಈ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಡಿದ ಆಸ್ಟ್ರೇಲಿಯಾ ತಂಡವು ಗ್ಲೆನ್ ಮ್ಯಾಕ್ಸ್‌ವೆಲ್ (120 ರನ್, 55 ಎಸೆತ, 12 ಬೌಂಡರಿ, 8 ಸಿಕ್ಸರ್) ಶತಕದ ಫಲವಾಗಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ ತಂಡವು ರೋಮನ್ ಪೋವಲ್ (63 ರನ್, 36ಎಸೆತ, 5 ಬೌಂಡರಿ, 4 ಸಿಕ್ಸರ್) ಅರ್ಧಶತಕದ ಫಲವಾಗಿ 20 ಓವರ್ಗಳಲ್ಲಿ 207 ರನ್ಗಳಿಸಿ ಸೋಲಪ್ಪಿಕೊಂಡಿತ್ತು.