ಮೆಲ್ಬೋರ್ನ್: ಎಂಸಿಜಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ (Border Gavaskar Trophy Test Series) ನಾಲ್ಕನೇ ಪಂದ್ಯದಲ್ಲಿ ಆತಿಥೇಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದೆ. ಇನ್ನೂ ಬಾಕ್ಸಿಂಗ್ ಡೇ ಟೆಸ್ಟ್ ವೇಳೆ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕಾನ್ಸ್ಟಾಸ್ ಭುಜಬಲ ಪ್ರದರ್ಶನದ ನಡುವೆಯೇ ಸ್ವಾರಸ್ಯಕರ ಘಟನೆಯೊಂದು ನಡೆದಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ.
ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ (Boxing Day Test) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆಸ್ಟ್ರೇಲಿಯಾ ತಂಡವು ಭಾರತದ ಬಿಗಿ ಬೌಲಿಂಗ್ ದಾಳಿ ನಡುವೆಯೂ ದಿಟ್ಟ ಪ್ರದರ್ಶನವನ್ನು ತೋರಿದೆ. ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್ಗಳು ಅರ್ಧಶತಕ ಗಳಿಸಿದ ಪರಿಣಾಮ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 311 ರನ್ಗಳಿಸಿದ್ದು, ಈ ವೇಳೆ ರೋಹಿತ್ ಶರ್ಮ (Rohit Sharma) ಯಶಸ್ವಿ ಜೈಸ್ವಾಲ್ (Yashasvi Jaiswal)ಮೇಲೆ ಸಿಟ್ಟಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾಗ ನಾಯಕ ರೋಹಿತ್ ಶರ್ಮ (Rohit Sharma) ಜೈಸ್ವಾಲ್ರನ್ನು ಸಿಲ್ಲಿ ಪಾಯಿಂಟ್ ಹಾಗೂ ಮಿಡ್ ಆಫ್ನಲ್ಲಿ ಫೀಲ್ಡಿಂಗ್ಗೆ ನಿಯೋಜಿಸಿದ್ದರು. ಈ ವೇಳೆ ಸ್ಮಿತ್ ಬ್ಯಾಟಿಂಗ್ ಮತ್ತು ಜಡೇಜಾ ಬೌಲಿಂಗ್ ಮಾಡುತ್ತಿದ್ದರು. ಈ ವೇಳೆ ಸ್ಮಿತ್ (Steve Smith) ಬಾರಿಸಿದ ಚೆಂಡು ತಮ್ಮತ್ತ ಬರುವ ಮುನ್ನವೇ ಮೇಲಕ್ಕೆ ಜಿಗಿದರು. ಇದನ್ನು ನೋಡಿದ ನಾಯಕ ರೋಹಿತ್ ಶರ್ಮ (Rohit Sharma) ನೀನು ಗಲ್ಲಿ ಕ್ರಿಕೆಟ್ ಆಡುತ್ತಿಲ್ಲ. ಬ್ಯಾಟ್ಸ್‌ಮನ್ ಆಡುವವರೆಗೆ ಮೇಲೆ ಎದ್ದೇಳಬೇಡ ಎಂದು ಹೇಳಿದ್ದಾರೆ. ರೋಹಿತ್ ಹಾಗೂ ಜೈಸ್ವಾಲ್ ನಡುವಿನ ಈ ಮಾತುಕತೆ ಸ್ಟಂಪ್ ಮೈಕಿನಲ್ಲಿ ರೆಕಾರ್ಡ್ ಆಗಿದ್ದು, ಸ್ಟಾರ್ ಸ್ಫೋರ್ಟ್ಸ್ (Star Sports) ಈ ವಿಡಿಯೋವನ್ನು ಪೋಸ್ಟ್ ಮಾಡಿದೆ.
ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡವು ಸ್ಯಾಮ್ ಕಾನ್‌ಸ್ಟಾಸ್ (60 ರನ್), ಉಸ್ಮಾನ್ ಖವಾಜಾ (57), ಮಾರ್ನಸ್ ಲಬುಶೇನ್ (72), ಸ್ಟೀವ್ ಸ್ಮಿತ್ (68*) ಅರ್ಧಶತಕಗಳ ಫಲವಾಗಿ ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.