ಕ್ರೀಡೆ

ದಶಕದ ಬಳಿಕ ಬಾರ್ಡರ್​-ಗವಾಸ್ಕರ್ ಟೆಸ್ಟ್​ ಸರಣಿ ಸೋತ Team India; WTC ಫೈನಲ್​ಗೆ ಲಗ್ಗೆ ಇಟ್ಟ ಆಸ್ಟ್ರೇಲಿಯಾ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್​ ಗ್ರೌಂಡಿನಲ್ಲಿ ನಡೆದ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ ಬಾರ್ಡರ್​-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಆತಿಥೇಯರು 6 ವಿಕೆಟ್​ಗಳ ಜಯ ಸಾಧಿಸಿದ್ದು, ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಟೆಸ್ಟ್​ ಸರಣಿಯಲ್ಲಿ ಜಯ ಸಾಧಿಸುವ ಮೂಲಕ ಆಸ್ಟ್ರೇಲಿಯಾ ತಂಡವು ವಿಶ್ವಟೆಸ್ಟ್​ ಚಾಂಪಿಯನ್​ಶಿಪ್ (WTC)​ ಫೈನಲ್​ ಟಿಕೆಟ್​ ಖಚಿತಪಡಿಸಿಕೊಂಡಿದೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಭಾರತ ತಂಡವು (Team India) ಮೊದಲ ಇನ್ನಿಂಗ್ಸ್​ನಲ್ಲಿ 185 ರನ್​ಗಳಿಗೆ ಆಲೌಟ್ ಆಯಿತು. ಪ್ರಥಮ ಇನ್ನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ತಂಡವು 181 ರನ್​ಗಳಿಗೆ ಆಲೌಟ್​ ಆಗುವ ಮೂಲಕ 4 ರನ್​ಗಳ ಹಿನ್ನಡೆಯನ್ನು ಅನುಭವಿಸಿತು. ಈ ಮೂಲಕ ಭಾರತ ಬೌಲರ್​ಗಳು ಆತಿಥೇಯರ ವಿರುದ್ಧ ಪ್ರಾಬಲ್ಯ ಸಾಧಿಸಿದರು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡವು (Team India) ರಿಷಭ್​ ಪಂತ್​ ಸ್ಫೋಟಕ ಅರ್ಧಶತಕದ ಫಲ ಹಾಗೂ ಬ್ಯಾಟ್ಸ್​ಮನ್​ಗಳ ವಿಫಲ ಪ್ರದರ್ಶನದ ಫಲವಾಗಿ 157 ರನ್​ಗಳಿಗೆ ಆಲೌಟ್​ ಆಯಿತು. ಮೊದಲ ಇನಿಂಗ್ಸ್​ನಲ್ಲಿನ 4 ರನ್​ಗಳ ಹಿನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 162 ರನ್​ಗಳ ಗುರಿ ಪಡೆಯಿತು.

ಅಲ್ಪ ಗುರಿಯನ್ನು ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವನ್ನು ಆರಂಭದಲ್ಲೇ ಕಟ್ಟಿ ಹಾಕಿದ ಭಾರತದ (Team India) ಬೌಲರ್​ಗಳ ಯಾವುದೇ ಒತ್ತಡಕ್ಕೆ ಒಳಗಾಗದೆ ಗುರಿಯನ್ನು ತಲುಪುವ ಮೂಲಕ ಗೆಲುವಿನ ನಗೆ ಬೀರಿತ್ತು. ಈ ಮೂಲಕ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಸರಣಿಯನ್ನು ಆಸ್ಟ್ರೇಲಿಯಾ 3-1 ಅಂತರದಿಂದ ಗೆದ್ದುಕೊಂಡಿತ್ತು.