Rohit Sharma : ಟೀಮ್ ಇಂಡಿಯಾದ ಸ್ಟಾರ್ ಓಪನರ್ ರೋಹಿತ್ ಶರ್ಮ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. 38 ವರ್ಷದ ರೋಹಿತ್, ಪ್ರಸ್ತುತ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಭಾರತದ ಮಾಜಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರ ಮೇಲ್ವಿಚಾರಣೆಯಲ್ಲಿ ಹಿಟ್ಮ್ಯಾನ್ ತಯಾರಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ಅವರು ಅಭ್ಯಾಸ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿದ ಕೇಳಿದ ಕೂಡಲೇ ಅಭಿಮಾನಿಗಳು ಶಿವಾಜಿ ಪಾರ್ಕ್‌ಗೆ ಜಮಾಯಿಸಿದರು. ಈ ವೇಳೆ ರೋಹಿತ್ಗೆ ಕೋಪ ತರಿಸಿದ ಒಂದು ಘಟನೆ ಕೂಡ ನಡೆಯಿತು.
ಶಿವಾಜಿ ಪಾರ್ಕ್‌ಗೆ ಬಂದಿದ್ದ ಪುಟ್ಟ ಅಭಿಮಾನಿಯೊಬ್ಬರು ರೋಹಿತ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದರು. ಬಾಲಕ, ರೋಹಿತ್ ಬಳಿಗೆ ಹೋಗುವಾಗ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಆತನನ್ನು ತಡೆದರು. ಇದನ್ನು ಗಮನಿಸಿದ ರೋಹಿತ್, ಭದ್ರತಾ ಸಿಬ್ಬಂದಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಅಲ್ಲದೆ, ಬಾಲಕನನ್ನು ತನ್ನ ಬಳಿಗೆ ಕಳುಹಿಸುವಂತೆ ಹೇಳಿದರು. ಬಳಿಕ ಆ ಬಾಲಕ, ರೋಹಿತ್ ಬಳಿಗೆ ಹೋಗಿ ಸೆಲ್ಫಿ ತೆಗೆದುಕೊಂಡು ಖುಷಿಪಟ್ಟನು. ಇದಕ್ಕೆ ಸಂಬಂಧಿಸಿದ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋ ನೋಡಿದ ನೆಟ್ಟಿಗರು ರೋಹಿತ್ ಶರ್ಮ ಅವರ ಮನಸ್ಸು ಬಂಗಾರ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇತ್ತೀಚೆಗೆ ರೋಹಿತ್ ಅವರನ್ನು ಭಾರತೀಯ ಏಕದಿನ ತಂಡದ ನಾಯಕತ್ವದ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಶುಭಮಾನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
ಇನ್ನು ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ನಂತರ ಆಸಿಸ್ ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆ. ಸುದೀರ್ಘ ವಿರಾಮದ ಬಳಿಕ ಆಸೀಸ್ ಪ್ರವಾಸಕ್ಕಾಗಿ ರೋಹಿತ್ ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಮಾಜಿ ನಾಯಕ ಮೊದಲಿಗಿಂತಲೂ ಈಗ ಹೆಚ್ಚು ಫಿಟ್ ಆಗಿ ಕಾಣುತ್ತಿದ್ದಾರೆ. (ಏಜೆನ್ಸೀಸ್)