ಐತಿಹಾಸಿಕ ಐಪಿಎಲ್ ವಿಜಯೋತ್ಸವಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆಗಳು ಎಂದು ಸಿಎಂ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ. ಕೊನೆಗೂ ಕನಸು ನನಸಾಗಿದೆ, ಈ ಸಲಾ ಕಪ್ ನಮ್ದೆ, ಅದ್ಭುತ ಪ್ರದರ್ಶನದಿಂದ ಹಿಡಿದು ಅಚಲ ಚೈತನ್ಯದವರೆಗೆ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೊತ್ತಿಸಿದೆ ಮತ್ತು ಪ್ರಪಂಚದಾದ್ಯಂತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಸಿಎಂ ಎಕ್ಸ್ ಖಾತೆಯಲ್ಲಿ ಅಭಿನಂದಿಸಿದ್ದಾರೆ.
IPL-2025 | ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ರೋಚಕ ಗೆಲುವು ಸಾಧಿಸಿದೆ. ಇನ್ನೂ ಆರ್ಸಿಬಿ ಗೆಲುವಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆಂಗಳೂರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು (ಜೂ.03) ಅಹಮದಾಬಾದ್‌ನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು.
ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ಗಳಿಸಿತು. ವಿರಾಟ್ ಕೊಹ್ಲಿ 43, ಪಾಟೀದಾರ್ 26 ಲಿವಿಂಗ್ಸ್ಟೋನ್ 25, ಜಿತೇಶ್ ಶರ್ಮಾ ಅಜೇಯ ರನ್ಗಳಿಸಿ ಬೃಹತ್ ಮೊತ್ತಕ್ಕೆ ಕಾರಣರಾದರು.