ನವದೆಹಲಿ: ಯುಎಸ್ಎ-ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದ 09ನೇ ಆವೃತ್ತಿಯ ಟಿ20 ವಿಶ್ವ ಸಮರದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದ್ದು, ಎರಡನೇ ಬಾರಿಗೆ ಚುಟುಕು ಕ್ರಿಕೆಟ್ನ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಇನ್ನೂ ಈ ಬಾರಿಯ ಟೂರ್ನಿಯಲ್ಲಿ ಭಾರತ ಕಪ್ ಗೆಲ್ಲಲು ರೋಹಿತ್ ಹಾಗೂ ವಿರಾಟ್ ತೆಗೆದುಕೊಂಡ ಆ ಪ್ರಮುಖ ನಿರ್ಧಾರವೇ ಮುಖ್ಯ ಕಾರಣ ಎಂದು ತಿಳಿದು ಬಂದಿದ್ದು, ರೋಹಿತ್ ಹಾಗೂ ವಿರಾಟ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಟಿ20 ವಿಶ್ವಕಪ್ ಶುರುವಾಗುವುದಕ್ಕೂ ಮುನ್ನ ಭವಿಷ್ಯದ ದೃಷ್ಠಿಯಿಂದ ವಿರಾಟ್ ಹಾಗೂ ರೋಹಿತ್ರನ್ನು ತಂಡದಿಂದ ಕೈ ಬಿಡುವಂತೆ ಒತ್ತಾಯ ಕೇಳಿ ಬಂದಿತ್ತು. ಇದರ ಹೊರತಾಗಿಯೂ ರೋಹಿತ್ ಹಾಗೂ ವಿರಾಟ್ರನ್ನು ಆಯ್ಕೆ ಮಾಡುವ ಮೂಲಕ ಬಿಸಿಸಿಐ ಈ ಇಬ್ಬರು ಆಟಗಾರರ ಮೇಲೆ ತನಗೆ ಸಂಪೂರ್ಣ ವಿಶ್ವಾಸ ಇರುವುದಾಗಿ ತೋರಿಸಿತ್ತು. ಅದಕ್ಕೆ ತಕ್ಕಂತೆ ಈ ಇಬ್ಬರು ಆಟಗಾರರು ತಂಡಕ್ಕೆ ಕಪ್ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದೀಗ ಈ ಕುರಿತು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಸಖತ್ ವೈರಲ್ ಆಗುತ್ತಿದೆ.
ಕಳಪೆ ಫಾರ್ಮ್ ನಡುವೆಯೂ ಹಾರ್ದಿಕ್ರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಕೊಹ್ಲಿ ಹಾಗೂ ರೋಹಿತ್ ತೆಗೆದುಕೊಂಡ ನಿರ್ಧಾರವೇ ಇಂದು ಭಾರತ ವಿಶ್ವಕಪ್ ಗೆಲ್ಲಲು ಸಾಧ್ಯವಾಯಿತು. ಹಾರ್ದಿಕ್ ಆಲ್ರೌಂಡ್ ಪ್ರದರ್ಶನದ ಮೂಲಕ ತಂಡಕ್ಕೆ ಕಪ್ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಹೀಗಾಗಿ ರೋಹಿತ್ ಹಾಗೂ ವಿರಾಟ್ ತೆಗೆದುಕೊಂಡ ನಿರ್ಧಾರ ಭಾರತ ಕಪ್ ಗೆಲ್ಲಲು ಸಹಕಾರಿಯಾಯ್ತು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, ಟಿ20 ವಿಶ್ವಕಪ್ ಶುರುವಾಗುವುದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ರೋಹಿತ್ ಹಾಗೂ ವಿರಾಟ್ ಅನುಪಸ್ಥಿತಿಯಲ್ಲಿ ತಂಡವನ್ನು ಕೆಲ ಟೂರ್ನಿಗಳಲ್ಲಿ ಮುನ್ನಡೆಸಿದ್ದರು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಪೂರ್ಣ ಪ್ರಮಾಣದ ನಾಯಕರಾಗಲಿದ್ದಾರೆ ಎಂಬ ವದಂತಿ ಜೋರಾಗಿ ಹರಡಲು ಶುರುವಾಯಿತು. ಆ ವೇಳೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ರೋಹಿತ್ ಹಾಗೂ ಕೊಹ್ಲಿ ಅವರೊಂದಿಗೆ ಈ ಗಾಯದಿಂದ ಚೇತರಿಸಿಕೊಂಡಿದ್ದ ಹಾರ್ದಿಕ್ರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದರು.