ನ್ಯೂಯಾರ್ಕ್: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೂ ವಿವಾದಗಳಿಗೂ ಎಲ್ಲಿಲ್ಲದ ನಂಟು ಎಂದು ಹೇಳಬಹುದಾಗಿದೆ. ಸದಾ ಒಂದಿಲ್ಲೊಂದು ವಿಚಾರಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗುವ ಪಾಕಿಸ್ತಾನ ಈ ಬಾರಿಯ ಟಿ-20 ವಿಶ್ವಕಪ್ನ ಸೂಪರ್ 8 ಹಂತಕ್ಕೆ ಲಗ್ಗೆ ಇಡುವಲ್ಲಿ ವಿಫಲವಾಗಿದೆ. ಕಳಪೆ ಪ್ರದರ್ಶನದ ಪಳವಾಗಿ ಈ ಬಾರಿ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದ್ದು, ಆಟಗಾರರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
ಇನ್ನೂ ಈ ಬಾರಿಯ ಟೂರ್ನಿಯಲ್ಲಿನ ಕಳಪೆ ಪ್ರದರ್ಶನಕ್ಕೆ ಪ್ರತಿಕ್ರಿಯಿಸಿರುವ ಪಾಕ್ ಆಟಗಾರ ತಂಡದ ಈ ಪರಿಸ್ಥಿತಿಗೆ ತಾವೇ ಹೊಣೆ ಎಂದು ಹೇಳಿದ್ದಾರೆ. ಭಾರತದ ವಿರುದ್ಧ ನಾನು ಸರಿಯಾಗಿ ಅಡಿದ್ದರೆ ತಂಡಕ್ಕೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಇಮಾದ್ ವಸೀಮ್, ಭಾರತದ ವಿರುದ್ಧದ ಪಂದ್ಯದಲ್ಲಿ ನಾನು ಉತ್ತಮ ಪ್ರದರ್ಶನ ನೀಡದೆ ಸೋಲಿಗೆ ಕಾರಣನಾದೆ. ಸಾಮಾನ್ಯವಾಗಿ ನಾನು ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಶಾಂತಯುವತಾವಗಿ ಆಡಿ ತಂಡಕ್ಕೆ ಗೆಲುವು ತಂದುಕೊಡುತ್ತೇನೆ. ಆದರೆ, ಈ ಬಾರಿ ಭಾರತದ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಗುರಿ ಮುಟ್ಟಿಸುವುದು ನನ್ನ ಕೆಲಸವಾಗಿತ್ತು. ಆದರೆ, ನಾನು ಅಂದುಕೊಂಡ ಹಾಗೆ ನಡೆಯಲಿಲ್ಲ. ಈ ಬಾರಿಯ ಟೂರ್ನಿಯಿಂದ ತಂಡ ಹೊರಬೀಳಲು ನಾನೇ ಕಾರಣ ಎಂದು ಇಮಾದ್ ವಸೀಮ್ ವಿಷಾದಿಸಿದ್ದಾರೆ.
ಹಾಲಿ ರನ್ನರ್ಅಪ್ ಆಗಿ ಈ ಬಾರಿಯ ಚುಟುಕು ವಿಶ್ವ ಸಮರವನ್ನು ಆರಂಭಿಸಿದ ಪಾಕಿಸ್ತಾನ ತಂಡವು ಕಳಪೆ ಪ್ರದರ್ಶನ ನೀಡುವ ಮೂಲಕ ಸೂಪರ್-8 ಪ್ರವೇಶಿಸುವುದು ಅನುಮಾನ ಎಂದು ಹೇಳಲಾಗಿದೆ. ಆಡಿದ ಮೊದಲ ಎರಡು ಪಂದ್ಯಗಳಲ್ಲೂ ಸೋತ ಪಾಕ್ ಪಡೆ ಇದೀಗ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ. ಅದರಲ್ಲೂ ಕ್ರಿಕೆಟ್ ಶಿಶು ಅಮೆರಿಕ ಹಾಗೂ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕ್ ತಂಡದ ಸೋಲು ಅದರ ಅಭಿಮಾನಿಗಳಿಗೆ ಆಘಾತ ನೀಡಿದೆ. ಹೀಗಾಗಿ ತಂಡದ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.