ಕ್ರೀಡೆ

ಏಕದಿನ ವಿಶ್ವಕಪ್ ಟೂರ್ನಿಯ ಪರಿಷ್ಕರಿಸಿದ ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಬದಲಾದ ಪಂದ್ಯಗಳ ಮಾಹಿತಿ...

ದೆಹಲಿ: ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ 2023ರ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆದ ಬೆನ್ನಲ್ಲೇ ಐಸಿಸಿಯು ಟೂರ್ನಿಯ ನವೀಕರಿಸಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

2023ರ ಅಕ್ಟೋಬರ್​ನಲ್ಲಿ ಆರಂಭವಾಗಲಿರುವ ​ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದ್ದು, ಶ್ರೀಲಂಕಾ ಅಕ್ಟೋಬರ್ 7ರಂದು ದೆಹಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಅಭಿಯಾನವನ್ನು ಮತ್ತು ಅಕ್ಟೋಬರ್ 6ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ನೆದರ್ಲೆಂಡ್ ತನ್ನ ಅಭಿಯಾನವನ್ನು ಆರಂಭಿಸಲಿದೆ.


ಆತಿಥೇಯ ಭಾರತ ತಂಡವು ಬದ್ಧ ಎದುರಾಳಿ ಪಾಕಿಸ್ತಾನ ಜತೆಗೆ ಅಕ್ಟೋಬರ್ 15ರಂದು ಮಧ್ಯಾಹ್ನ 2 ಗಂಟೆಗೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಡಲಿದೆ. ಈ ಟೂರ್ನಿಯ ಸೆಮಿಫೈನಲ್ ಪಂದ್ಯಗಳನ್ನು ಮುಂಬೈ ಮತ್ತು ಕೋಲ್ಕತಾದಲ್ಲಿ ನವೆಂಬರ್ 15 ಮತ್ತು 16ರಂದು ಆಯೋಜಿಸಲಾಗಿದೆ. ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.(ಏಜೆನ್ಸೀಸ್​​​)