IND vs BAN: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಮೊದಲ ಇನ್ನಿಂಗ್ಸ್ ಅಂತ್ಯಕ್ಕೆ ಬಾಂಗ್ಲಾದೇಶ ಆಲ್ಔಟ್ ಆಗುವ ಮೂಲಕ ಕೇವಲ 228 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ: ಜಿ¯್ಲÁಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ ಪಡೆ, 49.4 ಓವರ್ ಅಂತ್ಯಕ್ಕೆ 228 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾ ಬ್ಯಾಟರ್ಗಳನ್ನು ಕಾಡಿದ ಭಾರತದ ಬೌಲರ್ಗಳ ಪೈಕಿ ಮೊಹಮ್ಮದ್ ಶಮಿ 5 ವಿಕೆಟ್ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ದಾಖಲೆ ಬರೆದಿದ್ದಾರೆ. ಶಮಿ ನಂತರದಲ್ಲಿ ಹರ್ಷಿತ್ ರಾಣಾ 3 ವಿಕೆಟ್ ಕಬಳಿಸಿದರೆ, ಅಕ್ಸರ್ ಪಟೇಲ್ 2 ವಿಕೆಟ್ ಪಡೆದು ತಂಡದ ಪರ ಮಿಂಚಿದರು.
ಬಾಂಗ್ಲಾ ಪರ ತೋಹಿದ್ ಹೃದಯ್ ಆಕರ್ಷಕ ಶತಕ ( 100 ರನ್, 115 ಎಸೆತ) ಬಾರಿಸುವ ಮೂಲಕ ತಂಡದ ಪರ ಏಕಾಂಗಿ ಹೋರಾಟ ನಡೆಸಿದರು. ಹೃದಯ್ ಮತ್ತು ಜೆಕರ್ ಅಲಿ 68 (114 ಎಸೆತ) ಅಬ್ಬರದ ಬ್ಯಾಟಿಂಗ್, ತಂಡದ ಸ್ಕೋರ್ ಅನ್ನು 200ರ ಗಡಿದಾಟಿಸಲು ಸಹಾಯ ಮಾಡಿತು. ಬಾಂಗ್ಲಾ ನೀಡಿರುವ 229 ರನ್ ಬೆನ್ನಟ್ಟಲಿರುವ ಭಾರತ, ಹೇಗೆ ಪ್ರದರ್ಶನ ನೀಡಲಿದೆ? ಎಷ್ಟು ವೇಗವಾಗಿ ಪಂದ್ಯವನ್ನು ಗೆಲುವಿನ ಮೂಲಕ ಮುಗಿಸಲಿದೆ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.