IND vs ENG Test: ಪ್ರಸಕ್ತ ಇಂಗ್ಲೆಂಡ್ ಅಂಗಳದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸದ್ಯ ಭಾರತ ಮುಂದಿದೆ. ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ನೀಡಿರುವ 471 ರನ್ಗಳ ಬೃಹತ್ ಗುರಿಯನ್ನು ಬೆನ್ನತ್ತಿರುವ ಆಂಗ್ಲರು, ಈಗಾಗಲೇ ಮೂರು ವಿಕೆಟ್ಗಳನ್ನು ಕಳೆದುಕೊಂಡು 209 ರನ್ ಗಳಿಸಿದ್ದಾರೆ. ಈ ವೇಳೆ ಕಣಕ್ಕಿಳಿದ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೋ ರೂಟ್, ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಇದನ್ನೂ ಓದಿ: ‘ಸ್ನೇಹನಾ ಪ್ರೀತಿನಾ’ ಚಿತ್ರದ ನಟಿ Sindhu Tolani..ಒಂದು ಕಾಲದಲ್ಲಿ ನಾಯಕಿಯಾಗಿ ಮಿಂಚಿದ್ದ ಇವ್ರು ಈಗ ಚಿತ್ರರಂಗದಿಂದ ದೂರ..
ಮತ್ತೊಂದು ಅಪರೂಪದ ದಾಖಲೆಯನ್ನು ದಾಖಲಿಸಿರುವ ಜೋ ರೂಟ್, ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ. ಲೀಡ್ಸ್‌ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರೂಟ್ ಈ ಸಾಧನೆಗೈದಿರುವುದು ವಿಶೇಷ. ಇಂಗ್ಲೆಂಡ್ ಅಂಗಳದಲ್ಲಿ ಒಟ್ಟು ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್, ಇದುವರೆಗೆ 1,589 ರನ್ ದಾಖಲಿಸಿದ್ದಾರೆ.
ಈ ಮೊದಲು, ಈ ದಾಖಲೆ ಭಾರತೀಯ ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ಇಂಗ್ಲೆಂಡ್ ವಿರುದ್ಧ 1,575 ರನ್ ಗಳಿಸಿದ್ದಾರೆ. ರೂಟ್ ಮೊದಲ ಇನ್ನಿಂಗ್ಸ್‌ನಲ್ಲಿ ಸಚಿನ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿದು, ತಮ್ಮ ಹೆಸರನ್ನು ಅಗ್ರಸ್ಥಾನಕ್ಕೆ ತಂದಿದ್ದಾರೆ. ಆದಾಗ್ಯೂ, ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರೂಟ್ ತಮ್ಮ ಛಾಪು ಮೂಡಿಸುವಲ್ಲಿ ಎಡವಿದರು. ಟೀಮ್ ಇಂಡಿಯಾ ಬೌಲಿಂಗ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರ ಓವರ್ನಲ್ಲಿ ವಿಕೆಟ್ ಕಳೆದುಕೊಂಡ ರೂಟ್, ಕೇವಲ 28 ರನ್‌ಗೆ ಔಟ್ ಆಗಿ ಪೆವಿಲಿಯನ್ ಹಾದಿ ಹಿಡಿದರು.
1. ಜೋ ರೂಟ್ (ಇಂಗ್ಲೆಂಡ್) – 1579* ರನ್
2. ಸಚಿನ್ ತೆಂಡೂಲ್ಕರ್ (ಭಾರತ) – 1575 ರನ್
3. ರಾಹುಲ್ ದ್ರಾವಿಡ್ (ಭಾರತ) – 1376 ರನ್
4. ಅಲಸ್ಟೈರ್ ಕುಕ್ (ಇಂಗ್ಲೆಂಡ್) – 1196 ರನ್
6. ಸುನಿಲ್ ಗವಾಸ್ಕರ್ (ಭಾರತ) – 1152 ರನ್
6. ಗ್ರಹಾಂ ಗೂಚ್ (ಇಂಗ್ಲೆಂಡ್) – 1134 ರನ್