ಗ್ಕೆಬರ್ಹಾ: ಮಂಗಳವಾರ ಗ್ಕೆಬೆರಾದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಿಸ್ಟರ್ 360 ಎಂದೇ ಕರೆಯಲ್ಪಡುವ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಇದೀಗ ಟಿ-20 ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲನ್ನು ಸಾಧಿಸಿದ್ದು, ಅತೀ ವೇಗವಾಗಿ 2000 T20I ರನ್ ಕಲೆ ಹಾಕುವ ಮುಖೇನ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇದನ್ನೂ ಓದಿ: ಶಬರಿಮಲೆ: ಯಾತ್ರಾರ್ಥಿಗಳಲ್ಲಿ ಗಣನೀಯ ಹೆಚ್ಚಳ! ಸುರಕ್ಷತೆ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಈ ಹೆಗ್ಗುರುತನ್ನು ಅತ್ಯಂತ ವೇಗವಾಗಿ ತಲುಪಿದ ಭಾರತೀಯ ಎಂಬ ಹೆಗ್ಗಳಿಕೆಗೆ ಇದೀಗ ಸೂರ್ಯ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿರುವ ಸೂರ್ಯಕುಮಾರ್, ತಮ್ಮ 56ನೇ ಇನ್ನಿಂಗ್ಸ್‌ನಲ್ಲಿ 2000 ರನ್‌ಗಳ ಗಡಿಯನ್ನು ತಲುಪಿ, ವಿರಾಟ್ ಕೊಹ್ಲಿ ಅವರ 13 ವರ್ಷಗಳ ಹಿಂದಿನ 13 ದಾಖಲೆಯನ್ನು ಈಗ ಸರಿಗಟ್ಟಿದ್ದಾರೆ. ಈ ಸಂಗತಿ ತಿಳಿದ ಕೂಡಲೇ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆಯಿಂದ ಸೂರ್ಯಕುಮಾರ್ಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಭಾರತ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್.
ದಕ್ಷಿಣ ಆಫ್ರಿಕಾ: ಮ್ಯಾಥ್ಯೂ ಬ್ರೀಟ್ಜ್ಕೆ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೋಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ,(ಏಜೆನ್ಸೀಸ್).