ಲಖನೌ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ಗಳ ಅಂತರದಲ್ಲಿ ಜಯಗಳಿಸುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಾಯಕ ರೋಹಿತ್ ಶರ್ಮಾ (87 ರನ್, 101 ಎಸೆತ, 10 ಬೌಂಡರಿ, 3 ಸಿಕ್ಸರ್), ಸೂರ್ಯಕುಮಾರ್ ಯಾದವ್ (49 ರನ್, 47 ಎಸೆತ, 4 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ಫಲವಾಗಿ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು.
ಇಂಗ್ಲೆಂಡ್ ಪರ ಡೇವಿಡ್ ವಿಲ್ಲೇ (10-2-45-3), ಆದಿಲ್ ರಶೀದ್ (10-0-35-2), ಕ್ರಿಸ್ ವೋಕ್ಸ್ (9-1-33-2), ಮಾರ್ಕ್ ವುಡ್ (9-1-46-1), ಮೊಯಿನ್ ಅಲಿ (8-0-37-0), ಲಿಯಾಮ್ ಲಿವಿಂಗ್ಸ್ಟನ್ (4-1-29-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳ ಮೇಲೆ ಕಡಿವಾಣ ಹೇರಿದ ಭಾರತದ ಬೌಲರ್ಗಳು ಎದುರಾಳಿ ತಂಡವನ್ನು 34.5 ಓವರ್ಗಳಲ್ಲಿ 129ರನ್ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಭಾರತದ ಪರ ಮೊಹಮ್ಮದ್ ಶಮಿ (7-2-22-4), ಜಸ್ಪ್ರೀತ್ ಬುಮ್ರಾ (6.5-1-32-3), ಕುಲ್ದೀಪ್ ಯಾದವ್ (8-0-24-2), ರವೀಂದ್ರ ಜಡೇಜಾ (7-1-16-1), ಮೊಹಮ್ಮದ್ ಸಿರಾಜ್ (6-0-33-0) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಆಡಿದ ಆಡಿದ ಆರು ಪಂದ್ಯಗಳಲ್ಲಿ ಜಯಗಳಿಸಿದ್ದು, ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಸತತ ಸೋಲಿನಿಂದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿದೆ.