ಕ್ರೀಡೆ

ಭಾರತ-ಇಂಗ್ಲೆಂಡ್ ಟೆಸ್ಟ್​ ಸರಣಿ: ಕಿಂಗ್​ ಕೊಹ್ಲಿ ದಾಖಲೆ ಮುರಿದ ಶುಭಮನ್​ ಗಿಲ್​​!Shubman Gill

Shubman Gill: ಭಾರತೀಯ ಟೆಸ್ಟ್ ತಂಡದ ನಾಯಕನಾದ ಮೊದಲ ಸರಣಿಯಲ್ಲಿ ಮಾಜಿ ಕ್ಯಾಂಪ್ಟನ್​ ವಿರಾಟ್​​ ಕೊಹ್ಲಿ ದಾಖಲೆಯನ್ನು ಶುಭಮನ್ ಗಿಲ್ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಗಿಲ್ ಅಜೇಯ 78 ರನ್ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್​ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 692 ರನ್​ಗಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಚೊಚ್ಚಲ ಟೆಸ್ಟ್​ನಾಯಕತ್ವದಲ್ಲೇ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 11 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಶುಭ್​ಮನ್ ಗಿಲ್ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ ಈವರೆಗೆ 697 ರನ್ ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಭಾರತದ ಪರ ಅತ್ಯಧಿಕ ರನ್​ ಗಳಿಸಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಆಂಗ್ಲರ ನಾಡಿನಲ್ಲಿ ಸರಣಿವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಗವಾಸ್ಕರ್​ ದಾಖಲೆ ಬ್ರೇಕ್​ ಮಾಡ್ತಾರ ಗಿಲ್​..?

ಗಿಲ್​ ಭಾರತದ ದಂತಕಥೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸರ್ವಶ್ರೇಷ್ಠ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ. ಟೀಮ್ ಇಂಡಿಯಾ ಪರ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ ಗಳಿಸಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಗವಾಸ್ಕರ್ 774 ರನ್ ಕಲೆಹಾಕಿದ್ದರು. ಇದೀಗ 697 ರನ್​ಗಳಿಸಿರುವ ಗಿಲ್ 4ನೇ ಟೆಸ್ಟ್ ಅಥವಾ 5ನೇ ಟೆಸ್ಟ್ ಪಂದ್ಯದಲ್ಲಿ 78 ರನ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.