IND vs NZ Final: ಇಂದು (ಮಾ.09) ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 4 ವಿಕೆಟ್ಗಳಿಂದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸುವ ಮೂಲಕ 2025ರ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕಿವೀಸ್ ಪಡೆ, ಭಾರತಕ್ಕೆ ಬೌಲಿಂಗ್ ಮಾಡುವಂತೆ ಆಹ್ವಾನಿಸಿತು. ಆಂತೆಯೇ ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 49 ಓವರ್ನೊಳಗೆ ಫೈನಲ್ ಗೆಲ್ಲುವ ಮೂಲಕ ಕೋಟ್ಯಾಂತರ ಭಾರತೀಯರ ಆಶಯವನ್ನು ಈಡೇರಿಸಿತು.
ರೋಹಿತ್ ಶರ್ಮ ನಾಯಕತ್ವದಲ್ಲಿ 2024ರ ಟಿ-20 ವಿಶ್ವಕಪ್ ಗೆದ್ದ ಭಾರತ, 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಸಂತಸ ಮೂಡಿಸಿದೆ. (ಏಜೆನ್ಸೀಸ್)