ನವದೆಹಲಿ: ಪಾಕಿಸ್ತಾನದ ಹಾಗೂ ದುಬೈ (ಭಾರತದ ಪಂದ್ಯಗಳು ಮಾತ್ರ) ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ (Champions Trophy) ಕ್ಷಣಗಣನೆ ಆರಂಭವಾಗಿದ್ದು, ಕ್ರೀಡಾಭಿಮಾನಿಗಳು ಮಿನಿ ವಿಶ್ವಸಮರವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದಾರೆ. ಟೂರ್ನಿಯಲ್ಲಿ ಯಾವುದಾದರು ಒಂದು ಪಂದ್ಯ ಶುರುವಾಗುವುದಕ್ಕೂ ಮುಂಚೆಯೇ ಗಮನ ಸೆಳೆಯುತ್ತಿದೆ ಎಂದರೆ ಅದು ಭಾರತ ಹಾಗೂ ಪಾಕ್ ನಡುವಿನ ಮ್ಯಾಚ್ ಎಂದರೆ ತಪ್ಪಾಗಲಾರದು. ಫೆಬ್ರವರಿ 23ರಂದು ನಡೆಯಲಿರವ ಈ ಪಂದ್ಯ ಪ್ರತಿಬಾರಿಯಂತೆ ಈ ಭಾರಿಯೂ ಹೈಪ್ ಪಡೆದುಕೊಂಡಿದ್ದು, ಈ ಹೈವೋಲ್ಟೇಜ್ ಪಂದ್ಯದ ಕುರಿತು ಮಾಜಿ ಹಾಗೂ ಹಾಲಿ ಆಟಗಾರರು ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
ಇದೀಗ ಭಾರತ ಪಾಕ್ ಪಂದ್ಯದ ಕುರಿತು ಟೀಮ್ ಇಂಡಿಯಾದ ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದ ಯುವರಾಜ್ ಸಿಂಗ್ ಈ ಬಾರಿ ಭಾರತದ ವಿರುದ್ಧ ಪಾಕಿಸ್ತಾನ ಮೇಲುಗೈ ಸಾಧಿಸುತ್ತದೆ ಎಂದು ಹೇಳುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದು, ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆಯನ್ನು ನೀಡಿದ್ದಾರೆ.
ಸ್ಟಾರ್ಸ್ಫೋರ್ಟ್ಸ್ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಯುವರಾಜ್ ಸಿಂಗ್, ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ಭಾರತದ ವಿರುದ್ಧ ಪಾಕಿಸ್ತಾನ ಮೇಲುಗೈ ಸಾಧಿಸಲಿದೆ. ಏಕೆಂದರೆ ಈ ಬಾರಿ ಭಾರತ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಈ ಸ್ಟೇಡಿಯಂನಲ್ಲಿ ಭಾರತಕ್ಕಿಂತ ಪಾಕಿಸ್ತಾನ ಅತಿಹೆಚ್ಚು ಪಂದ್ಯಗಳನ್ನು ಆಡಿದೆ. ಹೀಗಾಗಿ ಈ ಪಿಚ್ನಲ್ಲಿ ಪಾಕಿಸ್ತಾನ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದೆ ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟಿ20 ಹಾಗೂ ಏಕದಿನ ಸರಣಿ ಗೆಲ್ಲುವ ಮೂಲಕ ಭರ್ಜರಿ ಹುಮ್ಮಸ್ಸಿನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಓಟವನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ವಿಸ್ತರಿಸಲು ಮುಂದಾಗಿದೆ. ಭಾರತ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಈಗಾಗಲೇ ತಾಲೀಮು ಆರಂಭಿಸಿದೆ. ಫೆಬ್ರವರಿ 20ರಂದು ಬಾಂಗ್ಲಾದೇಶ, ಫೆಬ್ರವರಿ 23ರಂದು ಪಾಕಿಸ್ತಾನ ಹಾಗೂ ಮಾರ್ಚ್ 02ರಂದು ನ್ಯೂಜಿಲೆಂಡ್ ವಿರುದ್ಧ ಪಂದ್ಯ ನಡೆಯಲಿದೆ. ಫೆಬ್ರವರಿ 23ರಂದು ನಡೆಯುವ ಪಂದ್ಯದಲ್ಲಿ ಭಾರತ ಗೆದ್ದು ಪಾಕಿಸ್ತಾನದ ವಿರುದ್ಧ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಮುಂದುವರೆಸಲು ಸಜ್ಜಾಗಿದೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೀ), ಕೆಎಲ್ ರಾಹುಲ್ (ವಿಕೀ), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ind vs